ಚಿಕ್ಕೋಡಿ: ಕರ್ನಾಟಕದಲ್ಲಿ ನಡೆಯುತ್ತಿರುವ ಉಪಚುನಾವಣೆ ಹಿನ್ನೆಲೆ ಕಾಗವಾಡ ಮತಕ್ಷೇತ್ರದಲ್ಲಿ ಇಂದು ಜೆಡಿಎಸ್ ರಣಕಹಳೆ ಮೊಳಗಿಸಲಿದ್ದು, ಮಾಜಿ ಸಿಎಂ ಕುಮಾರಸ್ವಾಮಿ ನೇತೃತ್ವದಲ್ಲಿ ಇಂದು ನಡೆಯಲಿರುವ ಜೆಡಿಎಸ್ ಸಮಾವೇಶಕ್ಕೆ ವೇದಿಕೆ ಸಿದ್ದಗೊಳ್ಳುತ್ತಿದೆ.
ಕಾಗವಾಡ ಮತಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಶ್ರೀಶೈಲ ತೂಗಶೆಟ್ಟಿ ಪರ ಪ್ರಚಾರಕ್ಕೆ ಇಂದು ಹೆಚ್.ಡಿ.ಕುಮಾರಸ್ವಾಮಿ ಕಾಗವಾಡ ಕ್ಷೇತ್ರದಲ್ಲಿ ಮತಬೇಟೆ ನಡಸಲಿದ್ದು, ಮಲಾಬಾದ್, ಮಧಭಾವಿ, ಐನಾಪೂರ ಗ್ರಾಮದಲ್ಲಿ ಬಹಿರಂಗ ಸಭೆ ನಡೆಸಲಿದ್ದಾರೆ.