ETV Bharat / state

ಪೀರನವಾಡಿಯ ರಾಯಣ್ಣ,ಶಿವಾಜಿ ಮೂರ್ತಿಗೆ ಪೊಲೀಸ್‌ ಭದ್ರತೆ

ಕಳೆದ ಕೆಲವು ದಿನಗಳಿಂದ ವಿವಾದಕ್ಕೆ ಎಡೆ ಮಾಡಿಕೊಟ್ಟಿದ್ದ ಬೆಳಗಾವಿಯ ಪೀರನವಾಡಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ಸಂಬಂಧ ಕಿಡಿಗೇಡಿಗಳು ಸೋಶಿಯಲ್​ ಮೀಡಿಯಾದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿರೋ ಕಾರಣ ವಿವಾದ ಸೃಷ್ಟಿಯಾಗಿತ್ತು.

ಬಿಗಿ ಪೊಲೀಸ್ ಭದ್ರತೆ
ಬಿಗಿ ಪೊಲೀಸ್ ಭದ್ರತೆ
author img

By

Published : Aug 30, 2020, 7:23 PM IST

ಬೆಳಗಾವಿ: ಸಾಮಾಜಿಕ ಜಾಲತಾಣಗಳಲ್ಲಿ ಕೆಲವು ಕಿಡಿಗೇಡಿಗಳು ಐತಿಹಾಸಿಕ ಮಹಾಪುರುಷರ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿರೋ‌ ಹಿನ್ನೆಲೆ ‌ ಪೀರನವಾಡಿಯಲ್ಲಿ ಪ್ರತಿಷ್ಠಾಪನೆ ಮಾಡಿದ್ದ ಸಂಗೊಳ್ಳಿ ರಾಯಣ್ಣ ಮತ್ತು ಶಿವಾಜಿ ಮೂರ್ತಿಗೆ ಪೊಲೀಸರು ಭದ್ರತೆ ಒದಗಿಸಿದ್ದಾರೆ.

ಐತಿಹಾಸಿಕ ಮಹಾಪುರುಷರ ಮೂರ್ತಿಗಳಿಗೆ ಭದ್ರತೆ
ಕಳೆದ ಹದಿನೈದು ದಿನಗಳಿಂದ ವಿವಾದಿತ ಸ್ಥಳವಾಗಿ ಗುರುತಿಸಲ್ಪಟ್ಟ ತಾಲೂಕಿನ ಪೀರನವಾಡಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ವಿವಾದ, ಜಿಲ್ಲಾಡಳಿತದ ಸಂಧಾನ ಸಭೆಯಲ್ಲಿ ಎರಡು ದಿನಗಳ ಹಿಂದೆಯೇ ಸುಖಾಂತ್ಯವಾಗಿತ್ತು. ಆದರೂ ಪೀರನವಾಡಿ ಗ್ರಾಮ ಮಾತ್ರ ಬೂದಿಮುಚ್ಚಿದ ಕೆಂಡದಂತಿದೆ. ಹೀಗಿರುವಾಗಲೇ ಶಿವಾಜಿ ಮೂರ್ತಿ ಕುರಿತು ಅವಮಾನ ಎಸಗುವ ರೀತಿಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಕಿಡಿಗೇಡಿಯೊಬ್ಬ ಹಾಕಿದ ಪೋಸ್ಟ್‌ನಿಂದ ಅಲ್ಲಿನ ವಾತಾವರಣ ಮತ್ತಷ್ಟು ಆತಂಕಕ್ಕೆ ಒಳಗಾಗಿದೆ.

ಹೀಗಾಗಿ ಪೊಲೀಸರು ಮುಂಜಾಗ್ರತಾ ಕ್ರಮವಾಗಿ ಪೀರನವಾಡಿಯಲ್ಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಶಿವಾಜಿ ಮೂರ್ತಿಗೆ ಪೊಲೀಸರು ಭದ್ರತೆ ಕಲ್ಪಿಸಿದ್ದಾರೆ. ಇಬ್ಬರು ಪಿಎಸ್ಐ, ಎರಡು ಕೆಎಸ್​ಆರ್​ಪಿ ತುಕಡಿ, ಒಂದು ಡಿಆರ್ ತುಕಡಿ ಸೇರಿದಂತೆ ನೂರಾರು ಜನ ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ.

ಅವಹೇಳಕಾರಿ ಪೋಸ್ಟ್‌ಗೆ ಸಂಬಂಧಿಸಿದಂತೆ ಖಡೇಬಜಾರ್, ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಕಿಚ್ಚು ಹೊತ್ತಿಸುವ ಪೋಸ್ಟ್ ಹಾಕಿದವರನ್ನು ಬಂಧಿಸಲು ಪೊಲೀಸರು ಜಾಲ ಬೀಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.