ಬೆಳಗಾವಿ: ಪಶ್ಚಿಮ ಬಂಗಾಳದಲ್ಲಿ ನಡೆದ ಹಿಂದೂ ಕುಟುಂಬದ ಹತ್ಯೆಯನ್ನು ಖಂಡಿಸಿ, ಹತ್ಯೆಕೋರರಿಗೆ ಕಠಿಣ ಶಿಕ್ಷೆ ನೀಡುವಂತೆ ಒತ್ತಾಯಿಸಿ ವಿಶ್ವಹಿಂದೂ ಪರಿಷತ್ ಬಜರಂಗದಳ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಯಿತು.
ನಗರದ ರಾಣಿ ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಪ್ರತಿಭಟನೆ ನಡೆಸಿದ ವಿಶ್ವಹಿಂದೂ ಪರಿಷತ್ ಹಾಗೂ ಭಜರಂಗದಳದ ಕಾರ್ಯಕರ್ತರು ಅಲ್ಲಿನ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕೂಡಲೆ ಹಂತಕರನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕೆಂದು ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.