ಬೆಳಗಾವಿ : ಸಾರಿಗೆ ಸಂಸ್ಥೆಯ ಗುತ್ತಿಗೆ ಆಧಾರಿತ ನೌಕರರನ್ನು, ಸರ್ಕಾರಿ ನೌಕರರನ್ನಾಗಿ ಪರಿಗಣಿಸಿ, ಸರ್ಕಾರಿ ನೌಕರರಿಗೆ ಒದಗಿಸುತ್ತಿರುವ ಎಲ್ಲ ಸೌಲಭ್ಯಗಳನ್ನು ಪೂರೈಸುವಂತೆ ಆಗ್ರಹಿಸಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬೆಳಗಾವಿ ವಿಭಾಗದ ಕಾರ್ಮಿಕರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಹಗಲು ರಾತ್ರಿ ಎನ್ನದೇ ಸರ್ಕಾರದ ಆದೇಶ ಪಾಲಿಸುತ್ತಿರುವ ನಾವು ರಾಜ್ಯದ ಸಮಸ್ತ ಜನರಿಗೆ ಅತ್ಯುತ್ತಮ ಸಾರಿಗೆ ಸೇವೆ ನೀಡುತ್ತಿದ್ದೇವೆ. ಆದರೆ, ನಮ್ಮನ್ನು ನಿಗಮದ ನೌಕರರನ್ನಾಗಿ ಸರ್ಕಾರ ದುಡಿಸಿಕೊಳ್ಳುತ್ತಿದ್ದು, ಸರ್ಕಾರಿ ನೌಕರರಾಗಿ ಪರಿಗಣಿಸಿ ಸರ್ಕಾರದ ಎಲ್ಲ ಸೌಲಭ್ಯಗಳು ನಮಗೆ ಸಿಗುವಂತೆ ಮಾಡಬೇಕೆಂದು ಗುತ್ತಿಗೆ ಆಧಾರಿತ ಸಾರಿಗೆ ನೌಕರರು ಒತ್ತಾಯಿಸಿದರು.
ಈ ವೇಳೆ ಮಾತನಾಡಿದ ಗುತ್ತಿಗೆ ಆಧಾರಿತ ಸಾರಿಗೆ ನೌಕರ ಸಂಘದ ಸಂಜಯ್, ಈಗಾಗಲೇ ಆಂಧ್ರಪ್ರದೇಶದಲ್ಲಿ ಗುತ್ತಿಗೆ ಆಧಾರಿತ ಸಾರಿಗೆ ನೌಕರರನ್ನು , ಸರ್ಕಾರಿ ನೌಕರರಾಗಿ ಪರಿಗಣಿಸಿ ಆದೇಶ ಹೊರಡಿಸಲಾಗಿದೆ. ಆದ್ದರಿಂದ ಈ ಬಾರಿಯ ಅಧಿವೇಶನದಲ್ಲಿ ನಮ್ಮನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಬೇಕೆಂದು ಅವರು ಒತ್ತಾಯಿಸಿದರು.