ಬೆಳಗಾವಿ: ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ರೈತ ಸಂಘಟನೆಗಳು ಬಂದ್ಗೆ ಕರೆ ನೀಡಿದ್ದು, ಬಸ್ ಸಂಚಾರ ಸ್ಥಗಿತಗೊಳಿಸುವಂತೆ ರೈತ ಸಂಘಟನೆ ಮುಖಂಡನೋರ್ವ ಸಾರಿಗೆ ಅಧಿಕಾರಿ ಕಾಲಿಗೆ ಬಿದ್ದ ಘಟನೆ ನಡೆಯಿತು.
ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಬಸ್‌ಗಳ ಸಂಚಾರ ಸ್ಥಗಿತಗೊಳಿಸುವಂತೆ ಅಧಿಕಾರಿಗಳು ಕಾಲಿಗೆ ಬಿದ್ದಿದ್ದಾರೆ. ರೈತ ಮುಖಂಡ ಚೂನಪ್ಪ ಪೂಜಾರಿ ವಾಯುವ್ಯ ಸಾರಿಗೆ ಸಂಸ್ಥೆಯ ಬೆಳಗಾವಿ ವಿಭಾಗೀಯ ನಿಯಂತ್ರಣಾಧಿಕಾರಿ ಮಹಾದೇವಪ್ಪ ಮುಂಜಿ ಅವರ ಕಾಲಿಗೆ ಬಿದ್ದರು.
ಬೆಳಗ್ಗೆ ಬಸ್ ನಿಲ್ದಾಣದ ಎದುರು ರೈತಪರ ಸಂಘಟನೆಗಳ ಪ್ರತಿಭಟನೆ ಹಿನ್ನೆಲೆಯಲ್ಲಿ ಬೆಳಗ್ಗೆಯಿಂದ ಬಸ್ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಪ್ರತಿಭಟನಾಕಾರರು ತೆರಳಿದ ಮೇಲೆ ಬಸ್‌ಗಳ ಸಂಚಾರ ಆರಂಭಿಸಲಾಗಿತ್ತು. ಪೊಲೀಸ್ ಭದ್ರತೆಯಲ್ಲಿ ಬಸ್‌ಗಳ ಸಂಚಾರ ಆರಂಭಿಸಲಾಗಿತ್ತು. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ರೈತ ಮುಖಂಡ ಚೂನಪ್ಪ ಬಸ್ ಸಂಚಾರ ಸ್ಥಗಿತಗೊಳಿಸುವಂತೆ ಸಾರಿಗೆ ಅಧಿಕಾರಿ ಕಾಲಿಗೆ ಬಿದ್ದರು.