ಬೆಳಗಾವಿ: ಮಣಗುತ್ತಿಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿ ಸ್ಥಾಪನೆಗೆ ಅವಕಾಶ ನೀಡಬೇಕು ಎಂದು ಆಗ್ರಹಿಸಿ ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷ ಸೇರಿದಂತೆ ವಿವಿಧ ಸಂಘಟನೆಗಳಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಲಾಯಿತು.
ಇದೇ ವೇಳೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ, ಹುಕ್ಕೇರಿ ತಾಲೂಕಿನ ಮಣಗುತ್ತಿ ಗ್ರಾಮದಲ್ಲಿ ಸರ್ಕಾರಿ ಗೌರವಗಳೊಂದಿಗೆ ಶಿವಾಜಿ ಮಹಾರಾಜರ ಮೂರ್ತಿ ಪ್ರತಿಷ್ಠಾಪನೆ ಮಾಡಬೇಕು. ಆದರೆ ಹೊರಗಿನ ಜನರ ರಾಜಕೀಯದಿಂದ ಮಣಗುತ್ತಿಯಲ್ಲಿ ಅಶಾಂತಿ ವಾತವರಣ ನಿರ್ಮಾಣವಾಗಿದೆ ಎಂದರು.
ಕೆಳಗಿಳಿಸಿದ ಛತ್ರಪತಿ ಶಿವಾಜಿ ಮೂರ್ತಿಯನ್ನು ಸಕಲ ಸರ್ಕಾರಿ ಗೌರವಗಳಿಂದ ಮರಳಿ ಗ್ರಾಮಸ್ಥರ ನಿಗದಿಪಡಿಸಿದ ಸ್ಥಳದಲ್ಲೇ ಪ್ರತಿಷ್ಠಾಪನೆ ಮಾಡಬೇಕು ಎಂದು ಒತ್ತಾಯಿಸಿದರು.