ETV Bharat / state

ಅಂಬೇಡ್ಕರ್ ರಾಜಗೃಹ ಧ್ವಂಸ ಖಂಡಿಸಿ ಬೆಳಗಾವಿಯಲ್ಲಿ ಪ್ರತಿಭಟನೆ

ಮುಂಬೈ ದಾದ್ರದಲ್ಲಿರುವ ಅಂಬೇಡ್ಕರ್​ ರಾಜಗೃಹವನ್ನು ಧ್ವಂಸಗೈದಿರುವ ಕಿಡಿಗೇಡಿಗಳ ಬಂಧನಕ್ಕೆ ಆಗ್ರಹಿಸಿ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪರಿಶಿಷ್ಟ ಜಾತಿಗಳ ಸಂಘಟನೆ ವತಿಯಿಂದ ಪ್ರತಿಭಟನೆ ನಡೆಯಿತು.

author img

By

Published : Jul 9, 2020, 5:07 PM IST

Protest by Dalit organizations in Belgavi
ದಲಿತ ಸಂಘಟನೆಗಳಿಂದ ಪ್ರತಿಭಟನೆ

ಬೆಳಗಾವಿ: ಮುಂಬೈನ ದಾದ್ರದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ವಿದ್ಯಾಭ್ಯಾಸ ಮಾಡಿದ ರಾಜಗೃಹವನ್ನು ಧ್ವಂಸಗೊಳಿಸಿದ ಕಿಡಿಗೇಡಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ನೀಡಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಯಿತು.

ಅಂಬೇಡ್ಕರ್ ರಾಜಗೃಹ ಧ್ವಂಸ ವಿರೋಧಿಸಿ ಪ್ರತಿಭಟನೆ

ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಜಮಾಯಿಸಿದ ವಿವಿಧ ಸಂಘಟನೆಗಳ ಕಾರ್ಯಕರ್ತರು, 2019 ರಲ್ಲಿ ವಿಶಾಖಪಟ್ಟಣದಲ್ಲಿ ಅಂಬೇಡ್ಕರ್ ಮೂರ್ತಿಯನ್ನು ಧ್ವಂಸಗೊಳಿಸಿ ದುಷ್ಕೃತ್ಯ ಎಸಗಿದ ಕಿಡಿಗೇಡಿಗಳಿಗೆ ಶಿಕ್ಷೆ ನೀಡದೆ ಜಾಮೀನು ಮೇಲೆ ಬಿಡುಗಡೆ ಮಾಡಲಾಗಿದೆ. ಈದೀಗ ಮತ್ತೆ ಮುಂಬೈನಲ್ಲಿ ಅಂಬೇಡ್ಕರ್ ವಿದ್ಯಾಭ್ಯಾಸ ಮಾಡಿದ ರಾಜಗೃಹದ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿ ಸಿಸಿ ಕ್ಯಾಮರಾ, ಗಾಜು ಪುಡಿಗೈದಿದ್ದಾರೆ. ದುಷ್ಕೃತ್ಯವೆಸಗಿದವರನ್ನು ಶೀಘ್ರವೇ ಬಂಧಿಸಿ ಕಠಿಣ ಕ್ರಮ ಜರುಗಿಸಬೇಕು. ಜೊತೆಗೆ ರಾಜಗೃಹಕ್ಕೆ ಪೊಲೀಸ್ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿ ಜಿಲ್ಲಾಡಳಿತ ಮೂಲಕ ಮಹಾರಾಷ್ಟ್ರ ಸಿಎಂಗೆ ಮನವಿ ಸಲ್ಲಿಸಿದರು.

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.