ಚಿಕ್ಕೋಡಿ(ಬೆಳಗಾವಿ): ಸೂಕ್ತ ಬಸ್ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ರಸ್ತೆ ಮೇಲೆ ಕುಳಿತು ವಿದ್ಯಾರ್ಥಿಗಳು ಚಿಕ್ಕೋಡಿ - ವಿಜಯಪುರ ರಾಜ್ಯ ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಸಾವಿರಾರು ರೂಪಾಯಿ ಹಣವನ್ನು ಪಡೆದು ಪಾಸ್ ನೀಡಿದ್ದಾರೆ. ಜಿಲ್ಲೆಯ ಚಿಕ್ಕೋಡಿ ಬಸವಪ್ರಭು ಕಾಲೇಜು ಬಳಿ ಬಸ್ ನಿಲ್ದಾಣವಿದ್ದರೂ ಬಸ್ ನಿಲ್ಲಿಸುತ್ತಿಲ್ಲ. ಹೀಗಾಗಿ ನಿತ್ಯ ನಾಲ್ಕು ಕಿಲೋಮೀಟರ್ ನಡೆದುಕೊಂಡು ಬರುವುದು ಅನಿವಾರ್ಯವಾಗಿದೆ ಎಂದು ಕೆಎಸ್ಆರ್ಟಿಸಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸ್ಥಳಕ್ಕೆ ಆಗಮಿಸಿದ ಸಾರಿಗೆ ಇಲಾಖೆ ಅಧಿಕಾರಿಗಳು ಮತ್ತು ನಿಡ್ಸೋಸಿ ಪರಮ ಪೂಜ್ಯರು ವಿದ್ಯಾರ್ಥಿಗಳನ್ನು ಸಮಾಧಾನಪಡಿಸಿದ್ದು, ಸಮಸ್ಯೆಯನ್ನು ಬಗೆಹರಿಸಲಾಗುವುದು ಎಂದು ಭರವಸೆ ನೀಡಿದ್ದಾರೆ. ಹೀಗಾಗಿ ವಿದ್ಯಾರ್ಥಿಗಳು ಪ್ರತಿಭಟನೆಯನ್ನು ಹಿಂಪಡೆದಿದ್ದಾರೆ. ಪ್ರತಿಭಟನೆಯಲ್ಲಿ ನೂರಾರು ವಿದ್ಯಾರ್ಥಿಗಳು ಭಾಗಿಯಾಗಿದ್ದರು.
ಇದನ್ನೂ ಓದಿ:ಕನ್ನಡ ಧ್ವಜ ಪ್ರದರ್ಶಿಸಿದ ವಿದ್ಯಾರ್ಥಿ ಮೇಲೆ ದೌರ್ಜನ್ಯ ಆರೋಪ: ರಸ್ತೆ ತಡೆದು ಕರವೇ ಪ್ರತಿಭಟನೆ