ಬೆಳಗಾವಿ: ಮಾದಕ ವಸ್ತುಗಳ ಮಾರಾಟ ಜಾಲದಲ್ಲಿ ತೊಡಗಿರುವವರನ್ನು ಬಂಧಿಸುವಂತೆ ಒತ್ತಾಯಿಸಿ ಇಂದು ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳದ ಕಾರ್ಯಕರ್ತರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ, ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ರಾಜ್ಯದ ಪ್ರತಿ ಜಿಲ್ಲೆಯಲ್ಲಿಯೂ ಡ್ರಗ್ಸ್ ಮಾರಾಟ ಜಾಲ ಕಂಡು ಬರುತ್ತಿದೆ. ಚಿತ್ರೋದ್ಯಮ ಹಾಗೂ ರಾಜಕೀಯದ ಪ್ರಭಾವಿ ವ್ಯಕ್ತಿಗಳ ಹೆಸರು ಡ್ರಗ್ಸ್ ದಂಧೆಯಲ್ಲಿ ಕೇಳಿ ಬರುತ್ತಿದೆ. ರಾಜ್ಯಯ ಎಲ್ಲೆಡೆ ವ್ಯಾಪಕವಾಗಿ ಬೆಳೆಯುತ್ತಿರುವ ಡ್ರಗ್ಸ್ ದಂಧೆಯಿಂದ ಯುವ ಜನಾಂಗ ದಾರಿ ತಪ್ಪುತ್ತಿದೆ. ಹಾಗಾಗಿ ರಾಜ್ಯದಲ್ಲಿ ಡ್ರಗ್ಸ್ ಸೇರಿದಂತೆ ಮಾದಕ ವಸ್ತುಗಳ ಮಾರಾಟ ಜಾಲಕ್ಕೆ ಕಡಿವಾಣ ಹಾಕಬೇಕಿದೆ ಎಂದು ಅಗ್ರಹಿಸಿದರು.
ಮಾದಕ ವಸ್ತುಗಳ ಮಾರಾಟ ಜಾಲದಲ್ಲಿ ತೊಡಗಿರುವ ಎಲ್ಲರನ್ನು ಕೂಡಲೇ ಬಂಧಿಸಬೇಕು, ಜೊತೆಗೆ ರಾಜ್ಯದಲ್ಲಿ ಸಂಪೂರ್ಣವಾಗಿ ಮಾದಕ ವಸ್ತುಗಳ ಮಾರಾಟ ಜಾಲವನ್ನು ತಡೆಗಟ್ಟುವ ನಿಟ್ಟಿನಲ್ಲಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮೂಲಕ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ವೈ.ಆರ್.ಚವ್ಹಾಣ, ರಾಹುಲ್, ಎಂ.ಎನ್.ಗಾಜಿಕರ್ ಮೊದಲಾದವರು ಉಪಸ್ಥಿತರಿದ್ದರು.