ಬೆಳಗಾವಿ : ವೇತನ ಶ್ರೇಣಿ ನಿಗದಿಪಡಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಳಗಾವಿ ಸುವರ್ಣ ವಿಧಾನಸೌಧ ಎದುರು ಬಸ್ತವಾಡ ಗ್ರಾಮದ ಹೊರವಲಯದಲ್ಲಿ ರಾಜ್ಯದ ವಿವಿಧೆಡೆಗಳಿಂದ ಆಗಮಿಸಿರುವ ಮೂರು ಸಾವಿರಕ್ಕೂ ಅಧಿಕ ಗ್ರಾಮ ಪಂಚಾಯಿತಿ ನೌಕರು ಪ್ರತಿಭಟನೆ ನಡೆಸುತ್ತಿದ್ದಾರೆ.
ಸಿ ಮತ್ತು ಡಿ ದರ್ಜೆಯ ನೌಕರರನ್ನು ಖಾಯಂ ಮಾಡಲು ಒತ್ತಾಯಿಸಿ ಶಾಂತ ರೀತಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ಪಂಚಾಯತ್ ನೌಕರರು ಸ್ಥಳಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಬಂದು ತಮ್ಮ ಅಹವಾಲು ಸ್ವೀಕರಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನದಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನೆಗೆ ಮುಂದಾಗಿ, ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಸಿದ್ಧವಾಗಿವೆ. ಬೆಳಗಾವಿ ಬಸ್ತವಾಡ, ಹಾಗೂ ಕೊಂಡಸಕೊಪ್ಪ ಗ್ರಾಮದ ಪ್ರದೇಶದಲ್ಲಿ ಪ್ರತಿಭಟನೆಗೆ ಸ್ಥಳಾವಕಾಶ ಮಾಡಿಕೊಡಲಾಗಿದೆ.
ಇವತ್ತು ಅಧಿವೇಶನದ ಮೊದಲ ದಿನವೇ ಮೂರು ಸಂಘಟನೆಗಳಿಂದ ಪ್ರತಿಭಟನೆ ನಡೆಯುತ್ತಿದೆ. ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವ ಹಾಗೂ ವಾಸುದೇವ ಮೇಟಿ ನೇತೃತ್ವದಲ್ಲಿ ಪ್ರತ್ಯೇಕ ಎರಡು ರೈತ ಸಂಘಟನೆಗಳು ಹೋರಾಟ ನಡೆಸುತ್ತಿವೆ.
ಇದನ್ನೂ ಓದಿ : ಸುವರ್ಣಸೌಧದಲ್ಲಿ ಸಾವರ್ಕರ್ ಫೋಟೋ: ಅಧಿವೇಶನ ಆರಂಭಕ್ಕೂ ಮುನ್ನ ಸಿದ್ದರಾಮಯ್ಯ ನೇತೃತ್ವದಲ್ಲಿ ಪ್ರತಿಭಟನೆ