ಬೆಳಗಾವಿ : ಕಾರ್ಮಿಕರು ಮತ್ತು ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಆಲ್ ಇಂಡಿಯಾ ಟ್ರೇಡ್ ಯುನಿಯನ್ ಕಾಂಗ್ರೆಸ್‌ನ ಬೆಳಗಾವಿ ಜಿಲ್ಲಾ ಘಟಕ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸಹಯೋಗದಲ್ಲಿ ಪ್ರತಿಭಟನೆ ನಡೆಸಿ, ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಲಾಯಿತು.
ಕೆಎಸ್ಆರ್ಟಿಸಿ ಸೇರಿದಂತೆ ಸಾರ್ವಜನಿಕ ವಲಯದ ಸಂಸ್ಥೆಗಳ ಖಾಸಗೀಕರಣವನ್ನು ಕೈ ಬಿಡಬೇಕು. ಕೊರೊನಾ ಸೋಂಕು ತಡೆ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೂ 5 ಸಾವಿರ ರೂ. ಗಳ ಪ್ರೋತ್ಸಾಹ ಧನ ಮಂಜೂರು ಸೇರಿದಂತೆ ಇನ್ನಿತರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕೆಎಸ್ಆರ್ಟಿಸಿ ಕಾರ್ಮಿಕರ ಯುನಿಯನ್ ಪ್ರಧಾನ ಕಾರ್ಯದರ್ಶಿ ಸಿ.ಎಸ್.ಬಿಡ್ನಾಳ್, ಕಾರ್ಮಿಕ ಸಂಘಟನೆ ನಾಯಕ ನಾಗೇಶ ಸಾತೇರಿ, ಸುಜಾತಾ ಬೆಳಗಾಂವಕರ್, ಮೀನಾಕ್ಷಿ ಕೊಟಗಿ, ಯಲ್ಲವ್ವ ಶೀಗೇಹಳ್ಳಿ ಇದ್ದರು.