ಬೆಳಗಾವಿ: ಕಾರ್ಖಾನೆಗಳಿಂದ ಉಂಟಾಗುತ್ತಿರುವ ಪರಿಸರ ಮಾಲಿನ್ಯ ತಡೆಗಟ್ಟುವಂತೆ ಆಗ್ರಹಿಸಿ ಬೆಳಗಾವಿ ತಾಲೂಕಿನ ಮಚ್ಛೆ ಗ್ರಾಮಸ್ಥರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಕಳೆದ ನಾಲ್ಕೈದು ವರ್ಷಗಳಿಂದ ಮಚ್ಛೆ ಗ್ರಾಮದಲ್ಲಿರುವ ಮಹಾಲಕ್ಷ್ಮೀ ಫೌಂಡ್ರಿ ಮತ್ತು ಕೋರ್ ಶಾಪ್ ಕಾರ್ಖಾನೆಗಳಿಂದ ಉಂಟಾಗುತ್ತಿರುವ ಮಾಲಿನ್ಯದಿಂದ ತೊಂದರೆ ಅನುಭವಿಸುತ್ತಿದ್ದೇವೆ. ಕಾರ್ಖಾನೆಗಳಿಂದ ಉಂಟಾಗುತ್ತಿರುವ ಧೂಳು, ಹೊಗೆ, ಕೆಮಿಕಲ್ ನೀರಿಂದ ಗ್ರಾಮದ ಮಕ್ಕಳು, ಮಹಿಳೆಯರು ಹಾಗೂ ವೃದ್ಧರಿಗೆ ರೋಗಗಳು ಹರಡುವ ಭೀತಿ ಎದುರಾಗಿದೆ.
ಇದರಿಂದಾಗಿ ದುಡಿದ ಹಣವೆಲ್ಲಾ ಆಸ್ಪತ್ರೆಯ ಪಾಲಾಗುತ್ತಿದೆ. ಕೂಡಲೇ ಪರಿಸರ ಮಾಲಿನ್ಯ ಉಂಟು ಮಾಡುತ್ತಿರುವ ಕಾರ್ಖಾನೆಗಳ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.