ETV Bharat / state

ಆಶಾ ಕಾರ್ಯಕರ್ತೆಯರನ್ನ ಡಿ ದರ್ಜೆ ನೌಕರರನ್ನಾಗಿ‌ ಪರಿಗಣಿಸುವಂತೆ ಆಗ್ರಹಿಸಿ ಪ್ರತಿಭಟನೆ - Belgaum District Collector's Office

ವಿವಿಧ ಬೇಡಿಕೆಗಳನ್ನ ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

Protest demanding to consider Asha workers as D-grade employees
ಆಶಾ ಕಾರ್ಯಕರ್ತೆಯರನ್ನ ಡಿ ದರ್ಜೆ ನೌಕರರನ್ನಾಗಿ‌ ಪರಿಗಣಿಸುವಂತೆ ಆಗ್ರಹಿಸಿ ಪ್ರತಿಭಟನೆ
author img

By

Published : Jul 2, 2020, 8:21 PM IST

ಬೆಳಗಾವಿ: ವಿವಿಧ ಬೇಡಿಕೆಗಳನ್ನ ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಆಶಾ ಕಾರ್ಯಕರ್ತೆಯರನ್ನ ಡಿ ದರ್ಜೆ ನೌಕರರನ್ನಾಗಿ‌ ಪರಿಗಣಿಸುವಂತೆ ಆಗ್ರಹಿಸಿ ಪ್ರತಿಭಟನೆ

ಜಿಲ್ಲಾಧಿಕಾರಿಗೆ ಮನವಿ ಮಾಡಿದ ಆಶಾ ಕಾರ್ಯಕರ್ತೆಯರು, ರಾಜ್ಯದ ಎಲ್ಲಾ ಆಶಾ ಕಾರ್ಯಕರ್ತೆಯರಿಗೂ ಆರೋಗ್ಯ ಸೇವೆ ಒದಗಿಸಬೇಕು. ಮಾಸಿಕ 12,000 ರೂ. ಗೌರವಧನ ನೀಡಬೇಕು. ವಿಮಾ ಸೌಲಭ್ಯ ಹಾಗೂ ಡಿ ದರ್ಜೆಯ ನೌಕರರನ್ನಾಗಿ ಕಾಯಂಗೊಳಿಸಬೇಕು. ಇದಲ್ಲದೆ ಕೊರೊನಾ ವೈರಸ್ ವಿರುದ್ಧ ಹೋರಾಡಲು ಅಗತ್ಯವಿರುವ ಆರೋಗ್ಯ ರಕ್ಷಾ ಸಾಮಗ್ರಿಗಳನ್ನ ನೀಡುವಂತೆ ಒತ್ತಾಯಿಸಿದರು.

ನಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಈಗಾಗಲೇ ಹಲವು ಬಾರಿ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಆದರೆ ಈವರೆಗೂ ಸರ್ಕಾರದಿಂದ ಯಾವ ಭರವಸೆ ಸಿಕ್ಕಿಲ್ಲ. ಹೀಗಾಗಿ ಸರ್ಕಾರ ನಮ್ಮೆಲ್ಲಾ ಬೇಡಿಕೆಗಳನ್ನು ಒಂದು ವಾರದಲ್ಲಿ ಈಡೇರಿಸದಿದ್ದರೆ ಜುಲೈ 10ರಂದು ರಾಜ್ಯದ ಎಲ್ಲಾ ಆಶಾ ಕಾರ್ಯಕರ್ತೆಯರು ಆರೋಗ್ಯ ಸೇವೆಯ ಎಲ್ಲಾ ಕೆಲಸಗಳನ್ನ ಸ್ಥಗಿತಗೊಳಿಸಿ ಸರ್ಕಾರದ ವಿರುದ್ಧ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.