ETV Bharat / state

ಬೆಳಗಾವಿ: ನರೇಗಾ ಯೋಜನೆಯಡಿ ಕೆಲಸಕ್ಕೆ ಆಗ್ರಹಿಸಿ ಪ್ರತಿಭಟನೆ...! - Protest demanding work under Narega Plan

ನರೇಗಾ ಯೋಜನೆಯಡಿ ಕೂಲಿ ಕೆಲಸ ನೀಡುವಂತೆ ಆಗ್ರಹಿಸಿ ಗ್ರಾಮಸ್ಥರು ಡಿಸಿ ಕಚೇರಿ ಆವರಣದಲ್ಲಿರುವ ತಾ.ಪಂ ಕಚೇರಿ ಎದುರಿಗೆ ಪ್ರತಿಭಟನೆ ನಡೆಸಿದರು.

Belgavi
ಪ್ರತಿಭಟನೆ
author img

By

Published : Jul 27, 2020, 4:12 PM IST

ಬೆಳಗಾವಿ: ನರೇಗಾ ಯೋಜನೆಯಡಿ ಕೂಲಿ ಕೆಲಸ ನೀಡುವಂತೆ ಆಗ್ರಹಿಸಿ ಮಣ್ಣಿಕೇರಿ, ಭೂತರಾಮನಟ್ಟಿ, ಗೆದ್ದಲೂರ ಗ್ರಾಮಸ್ಥರು ಡಿಸಿ ಕಚೇರಿ ಆವರಣದಲ್ಲಿರುವ ತಾ.ಪಂ ಕಚೇರಿ ಎದುರಿಗೆ ಪ್ರತಿಭಟನೆ ನಡೆಸಿದರು.

ಈ ವೇಳೆ ತಾಲೂಕು ಪಂಚಾಯತ್ ‌ಸಭಾಭವನಕ್ಕೆ ಆಗಮಿಸಿದ ನೂರಾರು ಕೂಲಿ ಕಾರ್ಮಿಕರು ಕೊರೊನಾ ಹೊಡೆತಕ್ಕೆ ಜೀವನವನ್ನು ನಡೆಸುವುದೇ ದುಸ್ಥರವಾಗಿದೆ. ಇಂತಹ ಸಂದರ್ಭದಲ್ಲಿ ನಮ್ಮ ಗ್ರಾಮ ಪಂಚಾಯಿತಿಗಳಲ್ಲಿ ನರೇಗಾ ಕೆಲಸವನ್ನು ನಿಲ್ಲಿಸಲಾಗಿದೆ. ಇದರಿಂದಾಗಿ ಕುಟುಂಬ ನಿರ್ವಹಣೆ ಕಷ್ಟವಾಗಿದೆ. ಹೀಗಾಗಿ ಆದಷ್ಟು ಬೇಗ ನರೇಗಾ ಯೋಜನೆಯಡಿ ಕೆಲಸ ನೀಡಬೇಕು ಎಂದು ತಾ.ಪಂ‌ ಇಓ ಅವರಿಗೆ ಮನವಿ ಸಲ್ಲಿಸಿದರು.

ನರೇಗಾ ಯೋಜನೆಯಡಿ ಕೂಲಿ ಕೆಲಸ ನೀಡುವಂತೆ ಆಗ್ರಹಿಸಿ ಗ್ರಾಮಸ್ಥರು ತಾ.ಪಂ ಕಚೇರಿ ಎದುರಿಗೆ ಪ್ರತಿಭಟನೆ ನಡೆಸಿದರು.

ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ತಾ.ಪಂ ಇಓ, ಕೃಷಿ ಕೆಲಸಗಳು ಇರುವುದರಿಂದ ನರೇಗಾ ಕೆಲಸವನ್ನು ನಿಲ್ಲಿಸಲಾಗಿದೆ. ಕೆಲ ದಿನಗಳ ನಂತರ ಕೆಲಸ ನೀಡುವುದಾಗಿ ಭರವಸೆ ನೀಡಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.