ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಮತ್ತು ಕೃಷ್ಣಾ ನದಿಗೆ ನೀರು ಹರಿಸಲು ಒತ್ತಾಯಿಸಿ ನಡೆಸುತ್ತಿರುವ ಪ್ರತಿಭಟನೆ 2ನೇ ದಿನಕ್ಕೆ ಕಾಲಿರಿಸಿದೆ.
ಪತ್ರಕರ್ತರ ಸಂಘ, ನ್ಯಾಯವಾದಿಗಳ ಸಂಘ, ಕರವೇ ಹಾಗು ಜಯಕರ್ನಾಟಕ ಸಂಘಟನೆ ಸೇರಿದಂತೆ 30 ಕ್ಕೂ ಹೆಚ್ಚು ಸಂಘಟನೆಗಳ ಸದಸ್ಯರು ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ದ ಘೋಷಣೆ ಕೂಗುತ್ತಾ ಪ್ರತಿಭಟನೆ ನಡೆಸುತ್ತಿದ್ದಾರೆ.
ಮಳೆಯನ್ನೂ ಲೆಕ್ಕಿಸದೆ ಜನರು ಪ್ರತಿಭಟನೆ ನಡೆಸುತ್ತಿದ್ದ ದೃಶ್ಯಾವಳಿಗೆ ಕಂಡುಬಂದಿದ್ದು,ಬೇಡಿಕೆ ಈಡೇರುವವರೆಗೂ ಹೋರಾಟ ಮುಂದುವರೆಸುವ ಎಚ್ಚರಿಕೆ ನೀಡಿದ್ದಾರೆ.