ಬೆಳಗಾವಿ: ಅನಗೋಳ ಆರೋಗ್ಯ ಕೇಂದ್ರದಲ್ಲಿ ಮೂಲ ಸೌಕರ್ಯಗಳನ್ನು ಒದಗಿಸಿ, ಆರೋಗ್ಯ ರಕ್ಷಣೆಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಅನಗೋಳ ನಿವಾಸಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಈ ವೇಳೆ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿಕೊಂಡ ನಿವಾಸಿಗಳು, ಅನಗೋಳ ಗ್ರಾಮದಲ್ಲಿ ಸೂಕ್ತ ಚಿಕಿತ್ಸೆ ಸಿಗದೇ ಸಾವಿನ ಸಂಖ್ಯೆ ಹೆಚ್ಚುತ್ತಿದೆ. ಇದರಿಂದಾಗಿ ಸಾಂಕ್ರಾಮಿಕ ರೋಗಗಳಿಗೆ ಸುಲಭವಾಗಿ ಚಿಕಿತ್ಸೆ ಸಿಗುತ್ತಿಲ್ಲ ಎಂದು ಆರೋಪಿಸಿದರು.
ಇದಲ್ಲದೇ ವೈದ್ಯರು ನೆಗಡಿ, ಕೆಮ್ಮಿನಂತಹ ರೋಗಗಳಿಗೆ ಚಿಕಿತ್ಸೆ ನೀಡಲು ಹಿಂದೇಟು ಹಾಕುತ್ತಿದ್ದಾರೆ. ಸಿವಿಲ್ ಆಸ್ಪತ್ರೆ, ಕೆಎಲ್‍ಇ ಆಸ್ಪತ್ರೆಗೆ ಶಿಫಾರಸ್ಸು ಮಾಡುತ್ತಿದ್ದಾರೆ. ಇದರಿಂದ ಬಡಜನರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಹೀಗಾಗಿ ಆರೋಗ್ಯ ಕೇಂದ್ರದಲ್ಲಿ ಮೂಲ ಸೌಕರ್ಯ ಕಲ್ಪಿಸಿ ಸೂಕ್ತ ಚಿಕಿತ್ಸೆಗೆ ಅನುಕೂಲ ಮಾಡಿಕೊಡಬೇಕು ಎಂದು ಆಗ್ರಹಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.