ಅಥಣಿ(ಬೆಳಗಾವಿ): ಕೇಂದ್ರ ಸರ್ಕಾರ 2003ರ ವಿದ್ಯುತ್ ಕಾಯ್ದೆ ತಿದ್ದುಪಡಿ ವಿರೋಧಿಸಿ ಅಥಣಿ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘದಿಂದ ಪ್ರತಿಭಟನೆ ನಡೆಸಲಾಯಿತು.
ಈ ವೇಳೆ ಮಾತನಾಡಿದ ಬಿ.ಎಂ.ಪಾಟೀಲ್, ವಿದ್ಯುತ್ ಕ್ಷೇತ್ರದಲ್ಲಿ ಹೊರ ಗುತ್ತಿಗೆ ಖಾಸಗೀಕರಣ ಮಾಡುತ್ತಿರುವುದು ಕಾರ್ಮಿಕ ವಿರೋಧಿ ನೀತಿಯಾಗಿದೆ. ಕೆಂದ್ರ ಸರ್ಕಾರ ತನ್ನ ನಿಲುವನ್ನು ತಕ್ಷಣವೇ ಕೈ ಬಿಡಬೇಕು. ಇಲಾಖೆಯಲ್ಲಿ ಪ್ರತಿಶತ ಐವತ್ತರಷ್ಟು ಹುದ್ದೆಗಳು ಖಾಲಿ ಇದ್ದರೂ ನಾವು ಅಚ್ಚುಕಟ್ಟಾಗಿ ಕೆಲಸ ನಿರ್ವಹಿಸುತ್ತಿದ್ದೇವೆ. ನಮ್ಮ ಹುದ್ದೆಗೆ ಕುತ್ತು ಬರುವ ಸಾಧ್ಯತೆ ಹೆಚ್ಚಾಗಿದೆ. ಹೀಗಾಗಿ ತಕ್ಷಣವೇ ಈ ನಿರ್ಧಾರವನ್ನು ಬದಲಿಸಿಕೊಳ್ಳಬೇಕು ಎಂದರು.
ನಂತರ ಸರ್ಕಾರದ ನಿಲುವನ್ನ ವಿರೋಧಿಸಿ ಕೈಗೆ ಕಪ್ಪು ಪಟ್ಟಿ ಧರಿಸಿಕೊಂಡು ಕೆಲಸ ಮುಂದುವರೆಸಿದರು.