ಬೆಳಗಾವಿ : ಗೋಕಾಕ್ ತಾಲೂಕಿನ ಶಿಂದಿಕುರಬೇಟ ಗ್ರಾಮದಲ್ಲಿ ಕೊರೊನಾ ಪೀಡಿತ ವ್ಯಕ್ತಿ ಇದ್ದಾನೆ ಅಂತಾ ಸುಳ್ಳು ಸುದ್ದಿ ಹರಡಿಸಿದ ಹಿನ್ನೆಲೆಯಲ್ಲಿ ಗ್ರಾಮಕ್ಕೆ ಘಟಪ್ರಭಾ ಪಿಎಸ್ಐ ಹೆಚ್ ವೈ ಬಾಲದಂಡಿ ಭೇಟಿ ನೀಡಿದರು. ಆದರೆ, ವೈದ್ಯರು ಪರೀಕ್ಷೆ ನಡೆಸಿದಾಗ ಆ ವ್ಯಕ್ತಿಗೆ ಕೊರೊನಾ ಲಕ್ಷಣಗಳು ಕಂಡು ಬಂದಿಲ್ಲ.
ದಯವಿಟ್ಟು ಈ ರೀತಿ ಸುಳ್ಳು ಸುದ್ದಿ ಹರಡಿಸಬೇಡಿ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡ ಪಿಎಸ್ಐ, ಈಗಾಗಲೇ ಕೊರೊನಾ ಇಂದ ದೇಶವೇ ತೊಂದರೆಯಲ್ಲಿದೆ. ಈ ರೀತಿ ಸುಳ್ಳು ಸುದ್ದಿ ಹರಡಿಸಬೇಡಿ. ಒಂದು ವೇಳೆ ಸುಳ್ಳು ಸುದ್ದಿ ಹರಡಿಸಿದರೆ,ಅವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುತ್ತದೆ ಎಂದರು. ಈ ಸುಳ್ಳು ಸುದ್ದಿ ಹರಡಿಸಿದವರ ವಿರುದ್ಧ ಪರಿಶೀಲನೆ ನಡೆಸಿ ಕ್ರಮಕೈಗೊಳ್ಳಲಾಗುತ್ತಿದೆ. ನಿಮ್ಮ ಜೀವನದ ಸಲುವಾಗಿ ಹಗಲು-ರಾತ್ರಿ ಎನ್ನದೇ ಪೊಲೀಸ್, ಆರೋಗ್ಯ ಇಲಾಖೆ, ಮಾಧ್ಯಮಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರೂ ಸೇರಿದಂತೆ ಎಲ್ಲರೂ ದುಡಿಯುತ್ತಿದ್ದಾರೆ.
ನಿಮ್ಮಗೆ ತೊಂದರೆಯಾದರೆ ಯಾವ ಸಮಯದಲ್ಲಿ ಬೇಕಾದರೂ ಕರೆ ಮಾಡಿ, ನಿಮಗೆ ನಾವು ಸಂಪೂರ್ಣವಾಗಿ ಸ್ಪಂದಿಸುತ್ತೇವೆ ಎಂದರು.