ಅಥಣಿ: ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ಇಂದು ಪಲ್ಸ್ ಪೋಲಿಯೋ ಲಸಿಕೆ ಹಾಕುವ ಕಾರ್ಯಕ್ರಮ ಭರದಿಂದ ಸಾಗಿದೆ. ಪಾಲಕರು ತಮ್ಮ ಮಕ್ಕಳಿಗೆ ಅಂಗನವಾಡಿ, ಸರ್ಕಾರಿ ಆಸ್ಪತ್ರೆ ಹಾಗೂ ಪೋಲಿಯೋ ಲಸಿಕೆ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಿಕೊಂಡು ಹೋಗುತ್ತಿದ್ದಾರೆ.
ತಾಲೂಕಿನಲ್ಲಿ ಒಟ್ಟು 265 ಪೋಲಿಯೋ ಲಸಿಕೆ ಕೇಂದ್ರಗಳಲ್ಲಿ ಐದು ವರ್ಷದ ಕೆಳಗಿನ 58096 ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ಒಟ್ಟು 81 ತಂಡಗಳು ಕಾರ್ಯನಿರ್ವಹಿಸಲಿದ್ದು, 57 ಜನ ಮೇಲ್ವಿಚಾರಕ ಅಧಿಕಾರಿಗಳನ್ನು ನೇಮಿಸಲಾಗಿದೆ. ಈ ಬಾರಿ ರಾಜ್ಯದಲ್ಲಿ ಸುಮಾರು 64,65,561 ಮಕ್ಕಳು ಲಸಿಕೆ ಹಾಕಿಸಿಕೊಳ್ಳಲಿದ್ದು, ಲಸಿಕೆ ಹಾಕಲು 33,021 ಬೂತ್ಗಳು, 46,620 ತಂಡಗಳು, 1,09,554 ಲಸಿಕಾ ಕಾರ್ಯಕರ್ತರನ್ನು ನಿಯೋಜನೆ ಮಾಡಲಾಗಿದೆ. 7,105 ಮೇಲ್ವಿಚಾರಕರು, 977 ಸಂಚಾರಿ ತಂಡಗಳು, 2,111 ಟ್ರಾನ್ಸಿಟ್ ತಂಡಗಳನ್ನು ರಚನೆ ಮಾಡಲಾಗಿದೆ
ರಾಜಾದ್ಯಂತ ಬೆಳಗ್ಗೆ 8 ರಿಂದ ಸಂಜೆ 5 ವರೆಗೆ ಲಸಿಕೆ ಹಾಕಲಾಗುತ್ತೆ. ಕಿರಿಯ ಆರೋಗ್ಯ ಸಹಾಯಕರು, ಆಶಾ ಕಾರ್ಯಕರ್ತೆಯರು ನಾಳೆಯಿಂದ ಮನೆ ಮನೆಗೆ ಹೋಗಿ ಲಸಿಕೆ ಹಾಕಲಿದ್ದಾರೆ.