ಬೆಳಗಾವಿ: ಪಶ್ಚಿಮ ಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಮಲಪ್ರಭಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಮಲಪ್ರಭಾ ನದಿ ನೀರು ಖಾನಾಪುರ ಪಟ್ಟಣಕ್ಕೆ ಲಗ್ಗೆ ಇಟ್ಟಿದ್ದು, ಕಾಂಗ್ರೆಸ್ ಶಾಸಕಿ ಅಂಜಲಿ ನಿಂಬಾಳ್ಕರ್ ಮನೆ ಸೇರಿ 50ಕ್ಕೂ ಅಧಿಕ ಮನೆಗಳು ಮುಳುಗಡೆಯಾಗಿವೆ.
ಖಾನಾಪುರದ ದುರ್ಗಾ ನಗರ, ನಿಂಬಾಳ್ಕರ್ ಲೇಔಟ್‌ನಲ್ಲಿ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್ ಮನೆ ಸಂಪೂರ್ಣ ಜಲಾವೃತಗೊಂಡಿದೆ. ಸ್ಥಳಕ್ಕೆ ಎನ್ಡಿಆರ್ಎಫ್ ಸಿಬ್ಬಂದಿ ದೌಡಾಯಿಸಿದ್ದು, ಸಂತ್ರಸ್ತರನ್ನು ಕಲ್ಯಾಣ ಮಂಟಪಕ್ಕೆ ಶಿಫ್ಟ್ ಮಾಡಿಸಲಾಗಿದೆ.
ಮಕ್ಕಳು, ವಯಸ್ಸಾದವರಿದ್ದು ಎಲ್ಲರನ್ನೂ ಬೋಟ್ನಲ್ಲಿ ಸುರಕ್ಷಿತ ಸ್ಥಳಕ್ಕೆ ಸಾಗಿಸಲಾಗಿದೆ.