ETV Bharat / state

ಬೆಳಗಾವಿಯಲ್ಲಿ ನಿರಂತರ ಮಳೆ: ಜನವಸತಿ ಪ್ರದೇಶಗಳಿಗೆ ನುಗ್ಗಿದ ನೀರು, ಗಣಪತಿ ಮಂದಿರ ಜಲಾವೃತ - ಜನವಸತಿ ಪ್ರದೇಶಗಳಿಗೆ ನುಗ್ಗಿದ ನೀರು

ಬೆಳಗಾವಿಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ತಗ್ಗು ಪ್ರದೇಶದ ಮನೆಗಳಿಗೆ ಮಳೆ ನೀರು ನುಗ್ಗಿ ಜನರ ಸಂಕಷ್ಟಕ್ಕೆ ಸಿಲುಕುವಂತೆ ಆಗಿದೆ. ಅಲ್ಲದೇ, ಮನೆಯಲ್ಲಿನ ವಸ್ತುಗಳನ್ನು ಕಾಪಾಡಿಕೊಳ್ಳುವುದೇ ದೊಡ್ಡ ಸವಾಲಾಗಿದೆ.

rain-water-inundated-residential-areas-in-belagavi
ಬೆಳಗಾವಿಯಲ್ಲಿ ನಿರಂತರ ಮಳೆ: ಜನವಸತಿ ಪ್ರದೇಶಗಳಿಗೆ ನುಗ್ಗಿದ ನೀರು, ಗಣಪತಿ ಮಂದಿರ ಜಲಾವೃತ
author img

By

Published : Jul 14, 2022, 3:23 PM IST

ಬೆಳಗಾವಿ: ಪಶ್ಚಿಮಘಟ್ಟ ಸೇರಿ ಕುಂದಾನಗರಿ ಬೆಳಗಾವಿಯಲ್ಲಿ ನಿರಂತರ ಮಳೆಯಿಂದ ಜನವಸತಿ ಪ್ರದೇಶಗಳಿಗೆ ನೀರು ನುಗ್ಗಿದೆ. ಮನೆಗಳು ಜಲಾವೃತಗೊಂಡ ನಿವಾಸಿಗಳು ಪರದಾಡುವಂತೆ ಆಗಿದೆ. ಅಲ್ಲದೇ, ನೀರು ಹೊರಗೆ ಹಾಕಲು ಹರಸಾಹಸ ಪಡುತ್ತಿದ್ದಾರೆ.

ಕಳೆದ ಮೂರು ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮಳೆಯಿಂದ ಕೇಶವ ನಗರ, ಅನ್ನಪೂರ್ಣೇಶ್ವರಿ ನಗರದ ಮನೆಗಳಿಗೆ ನೀರು ನುಗ್ಗಿದೆ. ಕೇಶವ ನಗರದಲ್ಲಿ 10ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಬಡಾವಣೆಗಳಲ್ಲಿ ಸರಿಯಾದ ಒಳ ಚರಂಡಿ ವ್ಯವಸ್ಥೆ ಮಾಡದ ಕಾರಣ ಈ ಪರಿಸ್ಥಿತಿ ಉಂಟಾಗಿದೆ ಸ್ಥಳೀಯ ನಿವಾಸಿಗಳು ಆಕ್ರೋಶ ಹೊರಹಾಕಿದ್ದಾರೆ.

ಬೆಳಗಾವಿಯಲ್ಲಿ ನಿರಂತರ ಮಳೆ: ಜನವಸತಿ ಪ್ರದೇಶಗಳಿಗೆ ನುಗ್ಗಿದ ನೀರು, ಗಣಪತಿ ಮಂದಿರ ಜಲಾವೃತ

ಇದೇ ವೇಳೆ, ವಾರ್ಡ್​​ ನಂಬರ್ 50ರ ನಗರ ಸೇವಕಿ ಸಾರಿಕಾ ಪಾಟೀಲ್ ಮಾತನಾಡಿ, ಎಲ್ಲ ಕಡೆಗಳಲ್ಲಿ ಪೇವರ್​​ಗಳನ್ನು ಅಳವಡಿಸಿದ್ದೇವೆ. ಹೀಗಾಗಿ ಈ ಬಾರಿ ಅಷ್ಟೊಂದು ಸಮಸ್ಯೆ ಆಗಿಲ್ಲ. ಈ ಹಿಂದೆ ಸಂಭವಿಸಿದ ಪ್ರವಾಹದಲ್ಲಿ ಎಲ್ಲ ಮನೆಗಳಿಗೆ ನೀರು ನುಗ್ಗಿ ಜನರಿಗೆ ಬಹಳಷ್ಟು ಸಮಸ್ಯೆ ಆಗಿತ್ತು. ನಾನು ಬೆಳಗ್ಗೆ 8 ಗಂಟೆಯಿಂದ ಸ್ಥಳದಲ್ಲಿಯೇ ಇದ್ದು, ಸಮಸ್ಯೆ ಪರಿಹಾರಕ್ಕೆ ಯತ್ನಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ಇತ್ತ, ಬೆಳಗಾವಿ - ಯಳ್ಳೂರು ಮಾರ್ಗದಲ್ಲಿರುವ ಗಣಪತಿ ದೇವಸ್ಥಾನದಲ್ಲಿ ನೀರು ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ಗರ್ಭಗುಡಿಗೆ ಬಳ್ಳಾರಿ ನಾಲಾ ನೀರು ನುಗ್ಗಿದೆ. ಅಲ್ಲದೇ, ದೇವಸ್ಥಾನದ ಸುತ್ತ-ಮುತ್ತಲಿನ ಸಾವಿರಾರು ಎಕರೆ ಭತ್ತದ ಗದ್ದೆ ಜಲಾವೃತಗೊಂಡಿದೆ. ಇದರಿಂದ ರೈತರು ಕೂಡ ಕಂಗಾಲಾಗಿದ್ದಾರೆ.

ಇದನ್ನೂ ಓದಿ: ಸೋರುತಿಹುದು ಬನವಾಸಿಯ ಮಧುಕೇಶ್ವರ ಮಾಳಿಗೆ.. ಅಧಿಕಾರಿಗಳ ವಿರುದ್ಧ ನಿರ್ಲಕ್ಷ್ಯ ಆರೋಪ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.