ಚಿಕ್ಕೋಡಿ : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಮನೆಯ ಮೇಲೆ ನಡೆದಿರುವ ಸಿಬಿಐ ದಾಳಿ ರಾಜಕೀಯ ಪ್ರೇರಿತವಲ್ಲ, ಸ್ವಾಯತ್ತ ಸಂಸ್ಥೆಗಳಿಂದ ಮಾಡಿದ ದಾಳಿ ಇದಾಗಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು.
ಪಟ್ಟಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ನಿವಾಸ ಸೇರಿದಂತೆ ಇತರೆಡೆ ನಡೆದಿರುವ ಸಿಬಿಐ ದಾಳಿ ರಾಜಕೀಯ ಪ್ರೇರಿತವಲ್ಲ, ಇದಕ್ಕೆ ಕಾಂಗ್ರೆಸ್ ಪಕ್ಷ ಉಪಚುನಾವಣೆಯ ಬಣ್ಣ ಹಚ್ಚಿ ಬಿಜೆಪಿ ಪಕ್ಷ ಮೇಲೆ ಗೂಬೆ ಕೂರಿಸುವಂತಹ ಕೆಲಸ ಮಾಡುತ್ತಿದೆ. ಇಂತಹ ದಾಳಿಗಳು ನಡೆದಾಗ ಇದು ಬಿಜೆಪಿಯ ರಾಜಕೀಯ ಪ್ರೇರಿತ ದಾಳಿ ಎಂದು ಹೇಳಿ ರಾಜಕೀಯ ಲಾಭ ಪಡೆಯುವುದಕ್ಕಾಗಿ ಇಲ್ಲ-ಸಲ್ಲದ ಆರೋಪವನ್ನು ಕಾಂಗ್ರೆಸ್ ನಾಯಕರು ಮಾಡುತ್ತಲೇ ಬಂದಿದ್ದಾರೆ. ಹಾಗಾಗಿ ಇದರಿಂದ ಬಿಜೆಪಿ ಪಕ್ಷದ ಮೇಲೆ ಯಾವುದೇ ಗಂಭೀರವಾದ ಪರಿಣಾಮ ಬೀರುವುದಿಲ್ಲ ಎಂದು ಹೇಳಿದರು.