ಬೆಳಗಾವಿ: ನಗರದಲ್ಲಿ ಸರಳ ರಾಜ್ಯೋತ್ಸವಕ್ಕೆ ಅಸಮ್ಮತಿ ಸೂಚಿಸಿರುವ ಕನ್ನಡ ಪರ ಸಂಘಟನೆಗಳು ಅದ್ಧೂರಿ ರಾಜ್ಯೋತ್ಸವಕ್ಕೆ ಪಟ್ಟು ಹಿಡಿದಿದ್ದಾರೆ. ಈ ಸಂಬಂಧ ನಿರ್ಣಯ ಕೈಗೊಳ್ಳುವಂತೆ ಸರ್ಕಾರ ಹಾಗೂ ಜಿಲ್ಲಾಡಳಿತಕ್ಕೆ ಅ.22 ರ ವರೆಗೆ ಕನ್ನಡ ಪರ ಸಂಘಟನೆಗಳು ಗಡುವು ನೀಡಿವೆ.
ಅದ್ಧೂರಿ ರಾಜ್ಯೋತ್ಸವ ಆಚರಣೆ ಸಂಬಂಧ ವಿವಿಧ ಕನ್ನಡ ಪರ ಸಂಘಟನೆ ಮುಖಂಡರ ನೇತೃತ್ವದಲ್ಲಿ ಇಲ್ಲಿನ ಸಾಹಿತ್ಯ ಭವನದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಅ.22 ರೊಳಗೆ ಅದ್ಧೂರಿ ರಾಜ್ಯೋತ್ಸವ ಸಂಬಂಧ ನಿರ್ಣಯ ಕೈಗೊಳ್ಳಬೇಕು. ಕಿತ್ತೂರು ಉತ್ಸವಕ್ಕೆ ಆಗಮಿಸುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅದ್ಧೂರಿ ರಾಜ್ಯೋತ್ಸವದ ಘೋಷಣೆ ಮಾಡಬೇಕು.
ನಮ್ಮ ಮನವಿಗೆ ಸ್ಪಂದಿಸದಿದ್ದರೆ ಅ.22 ರಿಂದ ರಾಜ್ಯಾದ್ಯಂತ ಹೋರಾಟ ಮಾಡಲು ಕನ್ನಡ ಪರ ಹೋರಾಟಗಾರರು ಎಚ್ಚರಿಕೆ ನೀಡಿದ್ದಾರೆ. ಅಲ್ಲದೇ 22 ರೊಳಗೆ ಜಿಲ್ಲಾಡಳಿತದ ಉಪಸಮಿತಿಯ ಸಭೆಯಿಂದಲೂ ದೂರ ಉಳಿಯಲು ನಿರ್ಧರಿಸಿದ್ದೇವೆ ಎಂದು ಕರವೇ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ಮಾಹಿತಿ ನೀಡಿದ್ದಾರೆ.