ETV Bharat / state

ಸುರೇಶ್ ಅಂಗಡಿ ನಿಧನದ ವಿಚಾರದಲ್ಲಿ ಡಿಕೆಶಿ ಸಣ್ಣ ರಾಜಕಾರಣ : ಸಚಿವ ರಮೇಶ್ ಜಾರಕಿಹೊಳಿ ಕಿಡಿ

ಯಾವಾಗಲೂ ಡಿಕೆಶಿ ಜನರ ದಿಕ್ಕು ತಪ್ಪಿಸುವ ಪ್ರಯತ್ನ ಮಾಡುತ್ತಾರೆ. ಅವರು ಹತಾಶರಾಗಿ ಏನೇನೋ ಸುಳ್ಳು ಹೇಳಿಕೆ ನೀಡುತ್ತಿದ್ದಾರೆ. ಸದ್ಯಕ್ಕೆ ಈ ಬಗ್ಗೆ ಹೆಚ್ಚು ಚರ್ಚೆ ಬೇಡ. ಮುಂದಿನ ದಿನಗಳಲ್ಲಿ ಗೊತ್ತಾಗುತ್ತೆ. ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ಟಿಕೆಟ್ ಯಾರಿಗೆ ನೀಡಬೇಕು ಎಂಬುವುದನ್ನು ಪಕ್ಷದ ಹೈಕಮಾಂಡ್ ನಿರ್ಣಯಿಸಲಿದೆ..

Ramesh jarakiholi
ರಮೇಶ್ ಜಾರಕಿಹೊಳಿ
author img

By

Published : Oct 2, 2020, 4:16 PM IST

ಬೆಳಗಾವಿ : ದಿವಂಗತ ಸುರೇಶ್ ಅಂಗಡಿ ನಿಧನದ ವಿಚಾರದಲ್ಲಿ ಡಿ ಕೆ ಶಿವಕುಮಾರ್ ಅವರು ರಾಜಕಾರಣ ಮಾಡುತ್ತಿದ್ದಾರೆ ಎಂದು ಸಚಿವ ರಮೇಶ್ ಜಾರಕಿಹೊಳಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುರೇಶ್ ಅಂಗಡಿ ನಿಧನದ ವಿಚಾರದಲ್ಲಿ ಡಿ ಕೆ ಶಿವಕುಮಾರ್ ಅವರು ರಾಜಕಾರಣ ಮಾಡುತ್ತಿದ್ದಾರೆ. ಎಷ್ಟೇ ದೊಡ್ಡವರಿದ್ದರೂ ಮಾರ್ಗಸೂಚಿ ಉಲ್ಲಂಘಿಸುವುದು ಬೇಡ ಎಂದು ನಮ್ಮ ಪ್ರಧಾನಿ ನರೇಂದ್ರ ಮೋದಿಯವರು ನಿರ್ಣಯ ಕೈಗೊಂಡಿದ್ದರು. ಈ ಕಾರಣಕ್ಕೆ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಪಾರ್ಥಿವ ಶರೀರವನ್ನು ಕೋಲ್ಕತ್ತಾಗೆ ಒಯ್ದಿರಲಿಲ್ಲ.

ದೆಹಲಿಯಲ್ಲಿಯೇ ಪ್ರಣಬ್ ಮುಖರ್ಜಿ ಅಂತ್ಯಕ್ರಿಯೆ ನೆರವೇರಿಸಲಾಯಿತು. ಇದೇ ಪ್ರಕಾರ ಸುರೇಶ ಅಂಗಡಿ ಅವರ ಅಂತ್ಯಕ್ರಿಯೆಯನ್ನೂ ದೆಹಲಿಯಲ್ಲಿಯೇ ನಡೆಸಲಾಯಿತು. ಡಿಕೆಶಿ ಸಣ್ಣತನ ರಾಜಕಾರಣ ಬಿಟ್ಟು ರಾಜ್ಯದ ಅಭಿವೃದ್ಧಿಗೆ ಕೈಜೋಡಿಸಲಿ ಎಂದರು.

ದಿ. ಸುರೇಶ್‌ ಅಂಗಡಿ ಕುಟುಂಬಕ್ಕೆ ಸಾಂತ್ವನ ಹೇಳಿದ ಸಚಿವ ರಮೇಶ್ ಜಾರಕಿಹೊಳಿ

ಯಾವಾಗಲೂ ಡಿಕೆಶಿ ಜನರ ದಿಕ್ಕು ತಪ್ಪಿಸುವ ಪ್ರಯತ್ನ ಮಾಡುತ್ತಾರೆ. ಅವರು ಹತಾಶರಾಗಿ ಏನೇನೋ ಸುಳ್ಳು ಹೇಳಿಕೆ ನೀಡುತ್ತಿದ್ದಾರೆ. ಸದ್ಯಕ್ಕೆ ಈ ಬಗ್ಗೆ ಹೆಚ್ಚು ಚರ್ಚೆ ಬೇಡ. ಮುಂದಿನ ದಿನಗಳಲ್ಲಿ ಗೊತ್ತಾಗುತ್ತೆ. ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ಟಿಕೆಟ್ ಯಾರಿಗೆ ನೀಡಬೇಕು ಎಂಬುವುದನ್ನು ಪಕ್ಷದ ಹೈಕಮಾಂಡ್ ನಿರ್ಣಯಿಸಲಿದೆ. ನಮ್ಮ ಪಕ್ಷದ ಬಗ್ಗೆ ಡಿಕೆಶಿ ಮಾತನಾಡದೇ ಅವರ ಪಕ್ಷದ ಬಗ್ಗೆ ಮಾತನಾಡಲಿ.

ಸುರೇಶ್ ಅಂಗಡಿ ಕುಟುಂಬಕ್ಕೆ ಟಿಕೆಟ್ ನೀಡಬೇಕೆಂದು ಅಭಿಮಾನಿಗಳ ಆಗ್ರಹಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ನಾವು ಪಕ್ಷದ ಸಿದ್ಧಾಂತದ ಮೇಲೆ ನಿರ್ಣಯ ಕೈಗೊಳ್ಳುತ್ತೇವೆ. ಬೆಳಗಾವಿ ಲೋಕಸಭೆ ಬಿಜೆಪಿ ಟಿಕೆಟ್ ಬಗ್ಗೆ ಚರ್ಚೆ ಮಾಡಲ್ಲ. ಹೈಕಮಾಂಡ್ ತೀರ್ಮಾನ ಅಂತಿಮ, ಅದಕ್ಕೆ ಎಲ್ಲರೂ ಬದ್ಧ ಎಂದು ತಿಳಿಸಿದರು.

ಪ್ರವಾಹ ಸಂತ್ರಸ್ತರಿಗೆ ಪರಿಹಾರ ತಲುಪಿಲ್ಲ ಎಂಬ ಸಿದ್ದರಾಮಯ್ಯ ಆರೋಪಕ್ಕೆ ಸೂಕ್ತ ವೇದಿಕೆಯಲ್ಲಿ ಉತ್ತರಿಸುತ್ತೇವೆ. ಈಗಾಗಲೇ ಸಿಎಂ ಬಿಎಸ್‌ವೈ ಕೊರೊನಾ ಹಗರಣ ಬಗ್ಗೆ ತನಿಖೆಗೆ ಆದೇಶಿಸಿದ್ದಾರೆ. ಬಿಎಸ್‌ವೈ ಕುಟುಂಬದ ವಿರುದ್ಧದ ಭ್ರಷ್ಟಾಚಾರ ಆರೋಪವನ್ನು ಸಿದ್ದರಾಮಯ್ಯ ಸಾಬೀತುಪಡಿಸಬೇಕು.

ಈ ಸಂಬಂಧ ಸಿಎಂ ಬಿಎಸ್‌ವೈ ನೇರ ಸವಾಲು ಹಾಕಿದ್ದಾರೆ. ಆರೋಪ ಸಾಬೀತಾದ್ರೆ ರಾಜಕೀಯ ನಿವೃತ್ತಿ ಕೈಗೊಳ್ಳುತ್ತೇನೆ ಎಂದು ಸವಾಲು ಹಾಕಿದ್ದಾರೆ. ಈ ಆರೋಪವನ್ನು ಅವರು ಸಾಬೀತು ಪಡಿಸಲಿ ಎಂದ ರಮೇಶ್ ಜಾರಕಿಹೊಳಿ,‌ ಪ್ರತಿ ಸವಾಲು ಹಾಕಿದರು.

ಅಂಗಡಿ ಕುಟುಂಬಕ್ಕೆ ರಮೇಶ್ ಸಾಂತ್ವನ : ಬೆಳಗಾವಿಯ ವಿಶ್ವೇಶ್ವರಯ್ಯ ನಗರದಲ್ಲಿರುವ ಸುರೇಶ್ ಅಂಗಡಿ ನಿವಾಸಕ್ಕೆ ಭೇಟಿ ನೀಡಿದ ಸಚಿವ ಜಾರಕಿಹೊಳಿ, ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು. ತಾಯಿ ಸೋಮವ್ವ, ಪತ್ನಿ ಮಂಗಳಾ, ಪುತ್ರಿಯರಾದ ಸ್ಫೂರ್ತಿ ಹಾಗೂ ಶ್ರದ್ಧಾಗೆ ದೈರ್ಯ ತುಂಬಿದರು. ಇದಾದ ನಂತರ ಸಚಿವರು ಕುಟುಂಬದ ಸದಸ್ಯರ ಜೊತೆಗೆ ಗೌಪ್ಯ ಸಭೆ ನಡೆಸಿದ್ದು ಮಾತ್ರ ಕುತೂಹಲಕ್ಕೆ ಕಾರಣವಾಯ್ತು.

ನಂತರ ಅಂಗಡಿ ನಿವಾಸದ ಎದುರು ಮಾತನಾಡಿದ ಅವರು, ಜಗದೀಶ್ ಶೆಟ್ಟರ್, ಸುರೇಶ್ ಅಂಗಡಿ ಹಾಗೂ ನಾನು ಒಂದು ಶಕ್ತಿಯಾಗಿದ್ವಿ. ಸುರೇಶ್ ಅಂಗಡಿ ಪತ್ನಿ ಸಹೋದರಿ ಮಂಗಳ ನಮ್ಮ ಮನೆಯಲ್ಲಿ ಬೆಳೆದಿದ್ದಾರೆ‌. ಸುರೇಶ ಅಕಾಲಿಕ ನಿಧನ ವೈಯಕ್ತಿಕವಾಗಿ ನನಗೆ ದೊಡ್ಡ ನಷ್ಟ ಆಗಿದೆ. ದಿ. ಸುರೇಶ್ ಅಂಗಡಿ ರಾಜಕೀಯದಲ್ಲಿ ಉನ್ನತ ಸ್ಥಾನಕ್ಕೆ ಹೋಗುತ್ತಿದ್ದರು. ಅವರ ಧರ್ಮಪತ್ನಿ, ತಾಯಿಗೆ ಧೈರ್ಯ ಹೇಳಿದ್ದೇನೆ. ಸುರೇಶ ಅಂಗಡಿ ಅವರ ಅಂತ್ಯಕ್ರಿಯೆ ಬಗ್ಗೆ ಮಾತನಾಡುವ ಯೋಗ್ಯತೆ ಡಿಕೆಶಿಗಿಲ್ಲ. ಬೆಳಗಾವಿ ಜಿಲ್ಲೆಯ ಜನರು ಒಳ್ಳೆಯ ವ್ಯಕ್ತಿಯನ್ನು ಕಳೆದುಕೊಂಡಿದ್ದಾರೆ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.