ಬೆಳಗಾವಿ: ಲೋಕಸಭೆ ಚುನಾವಣೋತ್ತರ ಸಮೀಕ್ಷೆಗಳು ಎನ್ಡಿಎ ಪರವಾಗಿ ಬರುತ್ತಿದ್ದಂತೆ ಇಂದು ಸಂಜೆ ಇಲ್ಲವೇ ಬೆಳಗ್ಗೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ತಿಳಿದು ಬಂದಿದೆ.
ಸಚಿವ ಸ್ಥಾನ ಕಳೆದುಕೊಂಡ ಬಳಿಕ ರಮೇಶ್ ಜಾರಕಿಹೊಳಿ ಕಾಂಗ್ರೆಸ್ ಜತೆ ಅಂತರ ಕಾಯ್ದುಕೊಂಡಿದ್ದರು. ಇದೀಗ ದೆಹಲಿಯತ್ತ ಪ್ರಯಾಣ ಬೆಳೆಸುತ್ತಿದ್ದು, ರೆಬಲ್ ನಾಯಕನ ನಡೆ ಕುತೂಹಲ ಮೂಡಿಸಿದೆ.
ಇಂದು ಬೆಳಗ್ಗೆ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದ ಮೂಲಕ ರಮೇಶ್ ಜಾರಕಿಹೊಳಿ ಬೆಂಗಳೂರಿಗೆ ತೆರಳಿದರು. ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲು ಅವರು ನಿರಾಕರಿಸಿದರು. ಬೆಂಗಳೂರಿನ ನಿವಾಸದಲ್ಲಿ ಸಂಜೆವರೆಗೆ ಆಪ್ತ ಶಾಸಕರ ಜತೆಗೆ ರಮೇಶ್ ಸಭೆ ನಡೆಸಲಿದ್ದಾರೆ ಎನ್ನಲಾಗಿದೆ. ಬಳಿಕ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಶಾಸಕರ ಆಪ್ತ ಮೂಲಗಳು ತಿಳಿಸಿವೆ.