ETV Bharat / state

ರಾಜಕೀಯ ಬದ್ಧವೈರಿ ಲಕ್ಷ್ಮೀ ಹೆಬ್ಬಾಳ್ಕರ್ ಸೋಲಿಸಲು ಗೋಕಾಕ್​ ಸಾಹುಕಾರ್ ಸ್ಕೆಚ್?

ಅಖಾಡಕ್ಕೆ ಇಳಿದಿರುವ ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಮರಾಠ ಸಮುದಾಯದ ಓಲೈಕೆಗೆ ತೀವ್ರ ಕಸರತ್ತು ನಡೆಸಿದ್ದಾರೆ.

Inauguration of Chhatrapati Shivaji Maharaj Youth Council
ಛತ್ರಪತಿ ಶಿವಾಜಿ ಮಹಾರಾಜ ಯುವಕ ಮಂಡಳಿ ಉದ್ಘಾಟನೆ
author img

By

Published : Dec 5, 2022, 1:12 PM IST

ಚಿಕ್ಕೋಡಿ(ಬೆಳಗಾವಿ): ಬರುವ ವಿಧಾನಸಭಾ ಚುನಾವಣೆಯಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್​ ಅವರನ್ನು ಸೋಲಿಸಲು ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಈಗಿನಿಂದಲೇ ಪೂರ್ವ ತಯಾರಿ ನಡೆಸುತ್ತಿದ್ದಾರೆ. ಇದೀಗ ಬೆಳಗಾವಿ ಗ್ರಾಮೀಣ ಕ್ಷೇತ್ರದ ವ್ಯಾಪ್ತಿಗೆ ಬರುವ ಬಡಸ ಕೆ.ಹೆಚ್ ಗ್ರಾಮದಲ್ಲಿ ಛತ್ರಪತಿ ಶಿವಾಜಿ ಮಹಾರಾಜ ಯುವಕ ಮಂಡಳಿಯನ್ನು ಉದ್ಘಾಟನೆ ಮಾಡುವ ಮೂಲಕ ಮರಾಠ ಮತಗಳನ್ನು ಸೆಳೆಯಲು ಕಸರತ್ತು ನಡೆಸಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಬೆಳಗಾವಿ ಜಿಲ್ಲೆಯ ಗ್ರಾಮೀಣ ಕ್ಷೇತ್ರದ ಶಾಸಕಿ, ರಮೇಶ್ ಜಾರಕಿಹೊಳಿ‌ ರಾಜಕೀಯ ಬದ್ಧವೈರಿ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಸೋಲಿಸಲು ಅಖಾಡಕ್ಕೆ ಇಳಿದಿದ್ದು, ಮರಾಠ ಸಮುದಾಯದ ಓಲೈಕೆಗೆ ತೀವ್ರ ಕಸರತ್ತು ನಡೆಸಿದ್ದಾರೆ. ಅದಕ್ಕಾಗಿಯೇ ಕಳೆದೊಂದು ವಾರದಿಂದ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ನಡೆಯುವ ವಿವಿಧ ಕಾರ್ಯಕ್ರಮಗಳಲ್ಲಿ ರಮೇಶ್​ ಜಾರಕಿಹೊಳಿ‌ ಭಾಗಿಯಾಗುತ್ತಿದ್ದಾರೆ.

ಕೆಲ ದಿನಗಳ ಹಿಂದಷ್ಟೇ ಆಪ್ತ ನಾಗೇಶ್ ಮನ್ನೋಳಕರನ್ನು ಸಿಎಂ ಸೇರಿದಂತೆ ಬಿಜೆಪಿ ನಾಯಕರಿಗೆ ಭೇಟಿ ಮಾಡಿಸಿದ್ದರು‌. ಚುನಾವಣೆಯ ರಣತಂತ್ರವನ್ನು ರಮೇಶ್​ ಜಾರಕಿಹೊಳಿ ರೂಪಿಸುತ್ತಿದ್ದಾರೆ ಎಂಬ ಮಾತುಗಳು ದಟ್ಟವಾಗಿವೆ. ಸದ್ಯ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ತೀವ್ರ ಜಿದ್ದಾಜಿದ್ದಿನ ಹೋರಾಟ ನಡೆದಿದ್ದು, ಮುಂಬರುವ ಚುನಾವಣೆ ಮತದಾರರು ಯಾರ ಪರವಾಗಿ ಇರುತ್ತಾರೆ ಅನೋದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: ತಾಳಿ ಕಟ್ಟಿದವರಿಗೆ ನಾವು ಕೈ ಹಾಕುವುದಿಲ್ಲ, ಕನ್ಯೆ ಇದ್ದರೆ ಆಫರ್ ನೀಡುತ್ತೇವೆ: ಸಿ ಎಂ ಇಬ್ರಾಹಿಂ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.