ಅಥಣಿ(ಬೆಳಗಾವಿ): ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್ಎಸ್ಎಸ್) ಹಿರಿಯ ಮುಖಂಡರನ್ನು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.
ಉತ್ತರ ಕರ್ನಾಟಕದ ಪ್ರಾಂತದ ಆರ್ಎಸ್ಎಸ್ ಹಿರಿಯ ಮುಖಂಡರಾದ ಅರವಿಂದ್ ರಾವ್ ದೇಶಪಾಂಡೆ ಅವರನ್ನು ಅಥಣಿ ಪಟ್ಟಣದ ಅವರ ನಿವಾಸದಲ್ಲಿ ಮಾಜಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಭೇಟಿ ಮಾಡಿ, ಸದ್ಯದ ರಾಜಕೀಯ ಪರಿಸ್ಥಿತಿ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.
![Ramesh Jarakiholi talk with RSS leaders in Athani](https://etvbharatimages.akamaized.net/etvbharat/prod-images/kn-ath-01-26-ramesh-jarakiyoli-av-kac10006_26062021112055_2606f_1624686655_149.jpg)
ಸಾಮಾನ್ಯ ಜನರಂತೆ ರಮೇಶ್ ಜಾರಕಿಹೊಳಿ ಅವರು ಅಥಣಿಗೆ ಆಗಮಿಸಿ ಅರವಿಂದ್ ರಾವ್ ದೇಶಪಾಂಡೆ ಅವರನ್ನು ಭೇಟಿ ಮಾಡಿದ್ದರು. ಎರಡು ಗಂಟೆಗಳಿಗೂ ಹೆಚ್ಚು ಕಾಲ ಅವರ ಜೊತೆ ಚರ್ಚೆ ಮಾಡಿದ್ದಾರೆ ಎನ್ನಲಾಗ್ತಿದೆ. ಆದರೆ ಮಾಧ್ಯಮಗಳಿಗೆ ಈ ಕುರಿತು ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.
ಇದನ್ನೂ ಓದಿ: ಸಾರಿಗೆ ನೌಕರರಿಗೆ ಬಿಗ್ ಶಾಕ್.. ವರ್ಷಪೂರ್ತಿ ಮುಷ್ಕರಕ್ಕೆ ಸರ್ಕಾರದ ಕೊಕ್ಕೆ