ETV Bharat / state

ಸದ್ಯಕ್ಕೆ ಮಹೇಶ್​ ಕುಮಟಳ್ಳಿಗಿಲ್ಲ ಸಚಿವ ಸಂಪುಟದಲ್ಲಿ ಸ್ಥಾನ: ರಮೇಶ್​ ಜಾರಕಿಹೊಳಿ

ಅಥಣಿ ಕಕಮರಿ ಕೊಟ್ಟಲಗಿ ನೀರಾವರಿ ಯೋಜನೆಯನ್ನು ಆದಷ್ಟು ಬೇಗ ರೂಪಿಸಲಾಗುವುದು. ಕುಡಿಯುವ ನೀರಿನ ಯೋಜನೆಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಬೇಸಿಗೆ ಸಂದರ್ಭದಲ್ಲಿ ಕೃಷ್ಣಾ ನದಿ ನೀರಿನ ಅಭಾವ ತಪ್ಪಿಸಲು ಮಹಾರಾಷ್ಟ್ರ ಸರ್ಕಾರ ಜೊತೆ ಮಾತುಕತೆ ನಡೆದಿದೆ ಎಂದು ಸಚಿವ ರಮೇಶ್​ ಜಾರಕಿಹೊಳಿ ತಿಳಿಸಿದರು.

ramesh jarakiholi
ಸಚಿವ ರಮೇಶ್​ ಜಾರಕಿಹೊಳಿ
author img

By

Published : May 25, 2020, 1:37 PM IST

ಅಥಣಿ: ಮಹೇಶ್ ಕುಮಟಳ್ಳಿಗೆ ಸಚಿವ ಸಂಪುಟದಲ್ಲಿ ಸದ್ಯಕ್ಕೆ ಸ್ಥಾನ ಇಲ್ಲ. ಸದ್ಯ ಅಥಣಿ ನಿರಾವರಿ ಕಾಮಗಾರಿಗಳ ಪರಿಶೀಲನೆಗೆ ಸಂಬಂಧಿಸಿದಂತೆ ಭೇಟಿ ನೀಡಿದ್ದೇನೆ ಎಂದು ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

ಈ ಸಂದರ್ಭದಲ್ಲಿ ಈಟಿವಿ ಭಾರತದೊಂದಿಗೆ ಮಾತನಾಡಿದ ಅವರು, ತಾಲೂಕಿನಲ್ಲಿ ವಿವಿಧ ನೀರಾವರಿ ಯೋಜನೆಗಳ ಕಾಮಗಾರಿ ಪರಿಶೀಲನೆಗೆಂದು ಎರಡು ದಿನಗಳ ಪ್ರವಾಸ ಕೈಗೊಂಡಿದ್ದೇನೆ. ಕಕಮರಿ ಕೊಟ್ಟಲಗಿ ನೀರಾವರಿ ಯೋಜನೆಯನ್ನು ಆದಷ್ಟು ಬೇಗ ರೂಪಿಸಲಾಗುವುದು. ಕುಡಿಯುವ ನೀರಿನ ಯೋಜನೆಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಬೇಸಿಗೆ ಸಂದರ್ಭದಲ್ಲಿ ಕೃಷ್ಣಾ ನದಿ ನೀರಿನ ಅಭಾವ ತಪ್ಪಿಸಲು ಮಹಾರಾಷ್ಟ್ರ ಸರ್ಕಾರ ಜೊತೆ ಮಾತುಕತೆ ನಡೆದಿದೆ. ಅಥಣಿ ತಾಲೂಕಿನ ನೀರಾವರಿ ಸಮಸ್ಯೆಗಳನ್ನು ತುರ್ತಾಗಿ ಬಗೆಹರಿಸಲಾಗುವುದು ಎಂದರು.

ಸಚಿವ ರಮೇಶ್​ ಜಾರಕಿಹೊಳಿ

ಜಮಖಂಡಿಯ ಮಾಜಿ ಶಾಸಕ ಶ್ರೀಕಾಂತ ಕುಲಕರ್ಣಿ ಎಂಎಲ್​ಸಿ ಆಯ್ಕೆ ವಿಚಾರವಾಗಿ ಮಾತನಾಡಿದ ಅವರು, ಎಂಎಲ್​ಸಿ ವಿಚಾರಕ್ಕೆ ಸಂಬಂಧಿಸಿದಂತೆ ವರಿಷ್ಠರು ನಿರ್ಧರಿಸಲಿದ್ದಾರೆ ಎಂದು ತಿಳಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.