ETV Bharat / state

ರಾಮದುರ್ಗ ಧರಣಿ ನಿರತರ ಸ್ಥಳಕ್ಕೆ ಇಂದು ರಮೇಶ್ ಜಾರಕಿಹೊಳಿ ಭೇಟಿ - Neighborhood solution

ಹಲವು ದಿನಗಳಿಂದ ನೆರೆ ಪರಿಹಾರಕ್ಕಾಗಿ ಅಹೋರಾತ್ರಿ ಧರಣಿ ನಡೆಸುತ್ತಿರುವ ಸ್ಥಳಕ್ಕೆ ಇಂದು ಸಚಿವ ರಮೇಶ್ ಜಾರಕಿಹೊಳಿ ಭೇಟಿ ನೀಡಲಿದ್ದಾರೆ. ಸೂಕ್ತ ಪರಿಹಾರ ನೀಡುವಂತೆ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿ ನಿರಂತರ ಪ್ರತಿಭಟನೆ ನಡೆಸುತ್ತಿದ್ದರೂ ಯಾವೊಬ್ಬ ಅಧಿಕಾರಿಯೂ ಸುಳಿದಿಲ್ಲ ಎಂದು ಧರಣಿ ನಿರತರು ಆಕ್ರೋಶ ಹೊರಹಾಕಿದ್ದರು.

Ramesh Jarakiholi visits Ramadurga protest Site today

author img

By

Published : Aug 26, 2020, 11:22 AM IST

ಬೆಳಗಾವಿ: ಪ್ರವಾಹದಿಂದಾಗಿ ಸೂರು ಕಳೆದುಕೊಂಡು ಸಂತ್ರಸ್ತರಾಗಿರುವ ಇಲ್ಲಿನ ರಾಮದುರ್ಗ ಜನತೆ ಪರಿಹಾರ ನೀಡುವಂತೆ ನಿರಂತರ ಪ್ರತಿಭಟನೆ ನಡೆಸುತ್ತಿದ್ದಾರೆ.

ಈ ಹಿನ್ನೆಲೆ ಇಂದು ಪ್ರತಿಭಟನಾ ಸ್ಥಳಕ್ಕೆ ಸಚಿವ ರಮೇಶ್ ಜಾರಕಿಹೊಳಿ ಭೇಟಿ ನೀಡಲಿದ್ದಾರೆ. ಭೀಕರ ಪ್ರವಾಹದಿಂದ ಕಂಗೆಟ್ಟ ಜನತೆ ಪರಿಹಾರ ನೀಡುವಂತೆ ಕೋರಿ ಇಲ್ಲಿನ ಮಿನಿವಿಧಾನಸೌಧದ ಮುಂದೆ ಅಹೋರಾತ್ರಿ ಧರಣಿ ಕೈಗೊಂಡಿದ್ದರು.

ಪರಿಹಾರ ನೀಡುವಂತೆ ಆಗ್ರಹಿಸಿ ಧರಣಿ ಕೈಗೊಂಡಿರುವ ಸಂತ್ರಸ್ತರು

ಕಳೆದ ವರ್ಷ ಸಂಭವಿಸಿದ ಭೀಕರ ಜಲಪ್ರಳಯ ಹಾಗೂ ಈ ವರ್ಷದ ಅತಿವೃಷ್ಟಿಯಿಂದ ಅಪಾರ ಪ್ರಮಾಣದ ಹಾನಿಯಾಗಿದೆ. ಸಂತ್ರಸ್ತರಿಗೆ ಇನ್ನೂ ಸೂಕ್ತ ಪರಿಹಾರ ಸಿಕ್ಕಿರಲಿಲ್ಲ. ಈ ಹಿನ್ನೆಲೆ ಸರ್ಕಾರ ಹಾಗೂ ಅಧಿಕಾರಿಗಳ ಕ್ರಮ ಖಂಡಿಸಿ ಹಾಗೂ ಪರಿಹಾರ ಬಿಡುಗಡೆಗೆ ಆಗ್ರಹಿಸಿ ನೆರೆ ಸಂತ್ರಸ್ತರು ಧರಣಿ ಕೈಗೊಂಡಿದ್ದಾರೆ.

ಅಲ್ಲದೇ ಪರಿಹಾರಕ್ಕೆ ಒತ್ತಾಯಿಸಿ ಅಹೋರಾತ್ರಿ ಪ್ರತಿಭಟನೆ ಕೈಗೊಂಡಿದ್ದು, ಸ್ಥಳಕ್ಕೆ ಬಾರದ ಸಿಎಂ ಹಾಗೂ ಜಿಲ್ಲಾ ವಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧವೂ ಆಕ್ರೋಶ ಹೊರ ಹಾಕಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.