ಬೆಳಗಾವಿ: ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿಯವರು ಜಿಲ್ಲೆಯ ಗೋಕಾಕ್ ನಗರದಲ್ಲಿರುವ ಬಸವೇಶ್ವರರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಸರಳವಾಗಿ ಜಯಂತಿ ಆಚರಿಸಿದರು.
ಕೊರೊನಾ, ಲಾಕ್ಡೌನ್ ಹಿನ್ನೆಲೆಯಲ್ಲಿ ಇಂದು ಜಿಲ್ಲೆಯಲ್ಲಿ ಸರಳವಾಗಿ ಬಸವಣ್ಣನವರ 887ನೇ ಜಯಂತಿಯನ್ನು ಆಚರಿಸಲಾಯಿತು. ಈ ವೇಳೆ ಮಾತನಾಡಿದ ಸಚಿವರು, ಜನರಿಗೆ ಜಯಂತಿಯ ಶುಭಾಶಗಳನ್ನು ಕೋರಿದರು. 12ನೇ ಶತಮಾನದಲ್ಲಿ ಸಾಮಾಜಿಕ ಸಾಮರಸ್ಯ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಬಸವಣ್ಣ ಮಾನವೀಯ ಮೌಲ್ಯಗಳನ್ನು ಜಗತ್ತಿಗೆ ಸಾರುವ ಮೂಲಕ ವಿಶ್ವಗುರುವಾಗಿದ್ದಾರೆ. ಬಸವಣ್ಣನವರ ತತ್ವಗಳನ್ನು ನಾವೆಲ್ಲರೂ ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಬಸವಣ್ಣನವರ ವಚನಗಳ ಸಾರವನ್ನು ಅರಿತು ಒಳ್ಳೆಯ ಜೀವನ ನಡೆಸಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಗೋಕಾಕ್ ಮುರುಘಾಮಠದ ಶರಣರು, ಸೇರಿದಂತೆ ಬಸವ ತತ್ವ ಅನುಯಾಯಿಗಳು ಹಾಜರಿದ್ದರು.