ETV Bharat / state

ಮಹದಾಯಿ ನೀರು ಹಂಚಿಕೆ ವಿಷಯ: ಸುಪ್ರೀಂ ಸಮ್ಮತಿಯನ್ನು ಸ್ವಾಗತಿಸಿದ ಸಚಿವ ರಮೇಶ್ ಜಾರಕಿಹೊಳಿ - belagavi latest news

ಉತ್ತರ ಕರ್ನಾಟಕದ ಬಹುದಿನದ ಬೇಡಿಕೆಯಾದ ಮಹದಾಯಿ ಯೋಜನೆಯ ನದಿ ನೀರು ಹಂಚಿಕೆ ವಿಚಾರದಲ್ಲಿ ಗೆಜೆಟ್ ಅಧಿಸೂಚನೆ ಹೊರಡಿಸಲು ಸುಪ್ರೀಂ ಕೋರ್ಟ್ ಸಮ್ಮತಿಸಿರುವುದನ್ನು ಸ್ವಾಗತಿಸುತ್ತೇನೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.

Ramesh jarkiholi gave compliments on supreme judgement about Mahadayi !
ಮಹದಾಯಿ ನೀರು ಹಂಚಿಕೆ: ಸುಪ್ರೀಂ ತೀರ್ಪು ಸ್ವಾಗತಿಸಿದ ಸಚಿವ ರಮೇಶ್ ಜಾರಕಿಹೊಳಿ!
author img

By

Published : Feb 20, 2020, 9:13 PM IST

ಬೆಳಗಾವಿ: ಉತ್ತರ ಕರ್ನಾಟಕದ ಬಹುದಿನದ ಬೇಡಿಕೆಯಾದ ಮಹದಾಯಿ ಯೋಜನೆಯ ನದಿ ನೀರು ಹಂಚಿಕೆ ವಿಚಾರದಲ್ಲಿ ಗೆಜೆಟ್ ಅಧಿಸೂಚನೆ ಹೊರಡಿಸಲು ಸುಪ್ರೀಂ ಕೋರ್ಟ್ ಸಮ್ಮತಿಸಿರುವುದನ್ನು ಸ್ವಾಗತಿಸುತ್ತೇನೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಕರ್ನಾಟಕ ಸರ್ಕಾರವು ಮಹದಾಯಿ ಯೋಜನೆ ಬಗ್ಗೆ ಗೆಜೆಟ್ ಅಧಿಸೂಚನೆ ಹೊರಡಿಸಲೇಬೇಕೆಂದು ಈ ಹಿಂದೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿತ್ತು ಎಂದು ತಿಳಿಸಿದ್ದಾರೆ. ಈ ಗೆಜೆಟ್ ಅಧಿಸೂಚನೆ ಹೊರಡಿಸಿದ ನಂತರ 2.18 ಟಿ.ಎಂ.ಸಿ. ಬಂಡೂರ ತಿರುವು ನಾಲೆ ಮತ್ತು 1.72 ಟಿ.ಎಂ.ಸಿ. ಕಳಸಾ ತಿರುವು ನಾಲೆಯಿಂದ (ಒಟ್ಟು 3.90 ಟಿ.ಎಂ.ಸಿ.) ನೀರನ್ನು ಮಲಪ್ರಭಾ ನದಿಗೆ ಹರಿಸಲು ಸಕ್ಷಮ ಪ್ರಾಧಿಕಾರದ ಅನುಮೋದನೆಯನ್ನು ಪಡೆದು ಕಾಮಗಾರಿಗಳನ್ನು ಕೈಗೊಳ್ಳುತ್ತೇವೆ. ಈ ಕುಡಿಯುವ ನೀರಿನ ಯೋಜನೆಯ ಅನುಷ್ಠಾನಕ್ಕೆ ಈಗಾಗಲೇ ಪರಿಸರ ಇಲಾಖೆಯಿಂದ ವಿನಾಯ್ತಿ ಪಡೆದಿದ್ದು ಕೇಂದ್ರ ಜಲ ಆಯೋಗ ಮತ್ತು ಅರಣ್ಯ ಇಲಾಖೆಯ ಅನುಮೋದನೆ ಪಡೆಯಬೇಕಾಗಿದೆ ಎಂದಿದ್ದಾರೆ.

ಇದಲ್ಲದೇ, ಮಹದಾಯಿ ಜಲಾನಯನ ಪ್ರದೇಶದ ಕೆರೆಕಟ್ಟೆಗಳನ್ನು ತುಂಬಲು 1.50 ಟಿ.ಎಂ.ಸಿ. ನೀರನ್ನು ಬಳಸುತ್ತೇವೆ. ವಿದ್ಯುಚ್ಛಕ್ತಿಯ ಉತ್ಪಾದನೆಗಾಗಿ 8.02 ಟಿ.ಎಂ.ಸಿ. ನೀರನ್ನು ಕರ್ನಾಟಕ ವಿದ್ಯುಚ್ಛಕ್ತಿ ನಿಗಮಕ್ಕೆ ನೀಡುತ್ತೇವೆ ಮತ್ತು ಬಳಸಿದ ನೀರನ್ನು ಪುನಃ ನದಿಗೆ ಬಿಡುತ್ತೇವೆಂದು ತಿಳಿಸಿದ್ದಾರೆ.

ಉತ್ತರ ಕರ್ನಾಟಕದ ರೈತರ ಕನಸು ನನಸಾಗುವ ಸಂದರ್ಭ ಈಗ ಕೂಡಿ ಬಂದಿದೆ. ನಮ್ಮ ಪಾಲಿನ ಒಟ್ಟು 13.42 ಟಿ.ಎಂ.ಸಿ. ನೀರನ್ನು ಸದ್ಭಳಕೆ ಮಾಡಿಕೊಳ್ಳಲು ಸುಪ್ರಿಂ ಕೋರ್ಟ್ ಅವಕಾಶ ಕಲ್ಪಿಸುತ್ತಿರುವುದು ಈ ಭಾಗದ ನೀರಾವರಿ ಯೋಜನೆಗಳನ್ನು ಕಾಲಮಿತಿಯಲ್ಲಿ ಅನುಷ್ಠಾನಗೊಳಿಸಲು ನೆರವಾಗುತ್ತದೆ. ದಾವೆಗಳ ಅಂತಿಮ ಇತ್ಯರ್ಥಕ್ಕಾಗಿ ವಿಚಾರಣೆಯ ದಿನಾಂಕವನ್ನು ಜುಲೈ 15, 2020 ರಂದು ನಿಗದಿಪಡಿಸಲಾಗಿದೆ. ಅಂದು ನಾವು ಹೆಚ್ಚುವರಿ ದಾಖಲಾತಿಗಳನ್ನು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿ ನಮ್ಮ ರಾಜ್ಯಕ್ಕೆ ನ್ಯಾಯಯುತವಾಗಿ ಸಿಗುವ ನೀರನ್ನು ಪಡೆದುಕೊಳ್ಳುತ್ತೇವೆ ಎಂದು ಸಚಿವ ರಮೇಶ್ ಜಾರಕಿಹೊಳಿ ಅವರು ವಿವರಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.