ETV Bharat / state

ಬಿದ್ದವರಿಗೆ ಡಿಸಿಎಂ ಹುದ್ದೆ ನೀಡಿದ್ರು, ಆದರೂ ಬಿಜೆಪಿಗೆ ನಿಷ್ಠೆ ತೋರಲಿಲ್ಲ: ರಮೇಶ್ ಜಾರಕಿಹೊಳಿ - ಬೆಳಗಾವಿ ಗ್ರಾಮೀಣ

ಬಿಜೆಪಿ ತ್ಯಜಿಸಿ ಕಾಂಗ್ರೆಸ್‌ ಸೇರಿದ ಲಕ್ಷ್ಮಣ್ ಸವದಿ ವಿರುದ್ಧ ರಮೇಶ್ ಜಾರಕಿಹೊಳಿ ಕಿಡಿ ಕಾರಿದರು.

Former minister Ramesh Jarkiholi spoke.
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮಾತನಾಡಿದರು.
author img

By

Published : Apr 14, 2023, 8:19 PM IST

ಚಿಕ್ಕೋಡಿ: ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಕಾಂಗ್ರೆಸ್ ಸೇರುತ್ತಿದ್ದಂತೆ ಅಥಣಿಯಲ್ಲಿ ರಮೇಶ್ ಜಾರಕಿಹೊಳಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ನಮ್ಮ ಪೀಡೆ ಹೋಗಿದೆ. ನನಗೆ ಇವತ್ತು ತುಂಬಾ ಸಂತೋಷವಾಗಿದೆ ಎಂದು ಗುಡುಗಿದರು. ಬಿಜೆಪಿ ಕಾರ್ಯಕರ್ತರ ಸಭೆ ಉದ್ದೇಶಿಸಿ ಮಾತನಾಡಿದ ಅವರು, ಬಿದ್ದವರನ್ನು ಪಕ್ಷ ಡಿಸಿಎಂ ಮಾಡಿತ್ತು. ಆದರೆ ಅವನು ಪಕ್ಷ ನಿಷ್ಠೆ ತೋರಲಿಲ್ಲ. ಇವತ್ತು ನಮ್ಮನ್ನು ಬಿಟ್ಟು ಹೋಗಿದ್ದಾನೆ. ನಮಗೆ ಚಲೋ ಆಯ್ತು ಎಂದು ಏಕವಚನದಲ್ಲೇ ಟೀಕಿಸಿದರು.

ರಮೇಶ್ ಜಾರಕಿಹೊಳಿ ಮತ್ತೆ ಕಾಂಗ್ರೆಸ್ ಹೋಗ್ತಾನೆ ಅನ್ನೋದು ಸವದಿ ತಲೆಯಲ್ಲಿತ್ತು. ಆದರೆ ನನಗೆ ಮಂತ್ರಿ ಸ್ಥಾನ ಇಲ್ಲದಿದ್ದರೂ ನಾನು ಪಕ್ಷದಲ್ಲೇ ಇದ್ದೆ. ಇವತ್ತು ನನಗೆ ಸಂತೋಷವಾಗಿದೆ. ಉದ್ದ ಅಂಗಿ ಹಾಕಿರುವವನು ಹೊರ ಹೋಗಿದ್ದಾನೆ ಎಂದರು. ನೀವು ಮಹೇಶ್ ಕುಮಠಳ್ಳಿ ಅವರನ್ನು ಗೆಲ್ಲಿಸಬೇಕು. ಒಂದೂವರೆ ವರ್ಷ ಸವದಿ ಮಂತ್ರಿ ಇದ್ದರು. ಅಥಣಿ ಅಭಿವೃದ್ಧಿಗೆ ಏನೂ ಮಾಡ್ಲಿಲ್ಲ ಎಂದು ಆರೋಪಿಸಿದರು.

ವಿಶೇಷ ವಿಮಾನದಲ್ಲಿ ಡಿಕೆಶಿ ಸವದಿ ಅವರನ್ನು ಕರೆದುಕೊಂಡು ಹೋಗಿದ್ದಾರೆ. ಕುತಂತ್ರಿ ಡಿ.ಕೆ.ಶಿವಕುಮಾರ್ ಎಂದು ಆಕ್ರೋಶ ವ್ಯಕ್ತಪಡಿಸಿದರು. ನಾನು ಅಥಣಿಯಲ್ಲೇ ಇರುತ್ತೇನೆ. ಅಥಣಿ ಜೊತೆಗೆ ಬೆಳಗಾವಿ ಗ್ರಾಮೀಣ ಭಾಗದಲ್ಲಿ ಇರುತ್ತೇನೆ. ನೀವು ನನಗೆ ಶಕ್ತಿ ಆಗಬೇಕು. ಲಕ್ಷ್ಮಣ್ ಸವದಿ ಸೋಲಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.

ರಾಜ್ಯ ಮತ್ತು ರಾಷ್ಟ್ರ ವರಿಷ್ಠರು ನನ್ನ ಮೇಲೆ ತುಂಬಾ ವಿಶ್ವಾಸವಿಟ್ಟಿದ್ದು, ಉದ್ದ ಅಂಗಿಯವನನ್ನು ನೀವು ಮನೆಗೆ ಕಳಿಸಬೇಕು. ನೀವು ಯಾವುದೇ ದಬ್ಬಾಳಿಕೆಗೆ ಅಂಜಬೇಡಿ. ಅಥಣಿ ಕ್ಷೇತ್ರಕ್ಕೆ ನಾನು ಬರುತ್ತೇನೆ. ಇಷ್ಟುದಿನ ಲಕ್ಷ್ಮಣ್ ಸವದಿ ನಮ್ಮ ಪಕ್ಷದಲ್ಲಿದ್ದರು ಎಂದು ನಾನು ಸುಮ್ಮನಿದ್ದೆ. ಇನ್ನು ಮೇಲೆ ನಾನು ಇಲ್ಲೇ ಇರುತ್ತೇನೆ. ಕೆಲವು ಸಹಕಾರಿ ಸೊಸೈಟಿಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿದರು.

ನಾವು ಅಧಿಕಾರಕ್ಕೆ ಬಂದಮೇಲೆ ಇದರ ಪರಿಶೀಲನೆ ಮಾಡಲಾಗುವುದು. ರೈತರು ನೀವು ಯಾವುದಕ್ಕೂ ಹೆದರಬೇಡಿ. ನಿಮ್ಮ ಜತೆ ನಾನು ಯಾವತ್ತೂ ಇರುತ್ತೇನೆ. ಕೃಷ್ಣಾ ನದಿಯಲ್ಲಿ ನೀರು ಬಿಡುವಂತೆ ನೋಡಿಕೊಳ್ಳಲಾಗುವುದು. ಎರಡು ಟಿಎಂಸಿ ನೀರು ಪ್ರತಿ ಬೇಸಿಗೆಯಲ್ಲಿ ಸಿಗುವಂತೆ ಮಾಡಲಾಗುವುದು ವಿದ್ಯುತ್ ಸಮಸ್ಯೆ ಹೋಗಲಾಡಿಸುತ್ತೇವೆ ಎಂದು ಹೇಳಿದರು.

ಇದನ್ನೂ ಓದಿ: ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರ್ಪಡೆಯಿಂದ ಅಸಮಾಧಾನ‌ ಇಲ್ಲ: ಸತೀಶ್ ಜಾರಕಿಹೊಳಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.