ETV Bharat / state

ರಮೇಶ್ ಜಾರಕಿಹೊಳಿ ತಲೆದಂಡ:​ ಡೀಸೆಲ್ ಸುರಿದುಕೊಂಡು ಆತ್ಮಹತ್ಯೆಗೆ ಬೆಂಬಲಿಗರ ಯತ್ನ - Ramesh jarakiholi

ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ಆಗಲಿ. ಅವರ‌ ರಾಜೀನಾಮೆ ಅಂಗೀಕರಿಸಬಾರದು ಎಂದು ಒತ್ತಾಯಿಸಿ ಗೋಕಾಕ್​ನಲ್ಲಿ ರಮೇಶ್ ಬೆಂಬಲಿಗರು ಪ್ರತಿಭಟನೆ ನಡೆಸಿದರು.

gokak protest
ಡಿಸೇಲ್ ಸುರಿದುಕೊಂಡು ಆತ್ಮಹತ್ಯೆಗೆ ಬೆಂಬಲಿಗರ ಯತ್ನ
author img

By

Published : Mar 3, 2021, 4:21 PM IST

ಬೆಳಗಾವಿ: ಸಚಿವ ಸ್ಥಾನದಿಂದ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಜಾರಕಿಹೊಳಿ ಬೆಂಬಲಿಗರು ಮೈಮೇಲೆ ಡೀಸೆಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದರು.

ಡೀಸೆಲ್ ಸುರಿದುಕೊಂಡು ಆತ್ಮಹತ್ಯೆಗೆ ಬೆಂಬಲಿಗರ ಯತ್ನ

ಗೋಕಾಕ್ ನಗರದ ಬಸವ ವೃತ್ತದಲ್ಲಿ ಟೈರ್​ಗೆ ಬೆಂಕಿ ಹಚ್ಚಿ ಸಿಎಂ ರಾಜೀನಾಮೆ ಅಂಗೀಕರಿಸಬಾರದು ಎಂದು ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಮೂವರು ಡೀಸೆಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತಕ್ಷಣ ಪೊಲೀಸರು ಆತ್ಮಹತ್ಯೆಗೆ ಯತ್ನಿಸಿದ ಮೂವರನ್ನು ವಶಕ್ಕೆ ಪಡೆದು ಆಸ್ಪತ್ರೆಗೆ ದಾಖಲಿಸಿದರು.

ಇನ್ನು ರಮೇಶ್​ ರಾಜೀನಾಮೆ ಅಂಗೀಕರಿಸಿದರೆ ಬೆಳಗಾವಿ ಜಿಲ್ಲೆ ಬಂದ್ ಮಾಡಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ್ದಾರೆ. ಈ ವೇಳೆ ಕೆಲವು ಬೆಂಬಲಿಗರನ್ನು ಪೊಲೀಸರು ವಶಕ್ಕೆ ಪಡೆದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.