ಬೆಳಗಾವಿ : ಶೀಘ್ರವೇ ಸಂಪುಟ ವಿಸ್ತರಣೆ ಆಗಲಿದೆ ಎಂಬ ಸುಳಿವು ಸಿಗುತ್ತಿದ್ದಂತೆ ಮರಳಿ ಮಂತ್ರಿ ಸ್ಥಾನ ಪಡೆಯಲು ಶಾಸಕ ರಮೇಶ್ ಜಾರಕಿಹೊಳಿ ದೇವರ ಮೊರೆ ಹೋಗಿದ್ದಾರೆ.
ಇತ್ತೀಚೆಗೆ ಉತ್ತರ ಭಾರತದ ಧಾರ್ಮಿಕ ಪ್ರವಾಸ ಕೈಗೊಂಡಿದ್ದ ರಮೇಶ್ ಜಾರಕಿಹೊಳಿ ಟೆಂಪಲ್ ರನ್ ಮುಂದುವರೆಸಿದ್ದಾರೆ. ನಿನ್ನೆ ಮಹಾರಾಷ್ಟ್ರದ ಕೊಲ್ಹಾಪುರ ಮಹಾಲಕ್ಷ್ಮಿ ದೇವಿ ದರ್ಶನ ಪಡೆದರು.
ಕಳೆದ ವಾರ ಕೇದಾರನಾಥ, ಬದ್ರಿನಾಥಗೆ ರಮೇಶ್ ಜಾರಕಿಹೊಳಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದರು. ಪುತ್ರ ಅಮರನಾಥ ಸೇರಿ ಆಪ್ತರೊಂದಿಗೆ ರಮೇಶ್ ಜಾರಕಿಹೊಳಿ ಕೇದಾರನಾಥನ ದರ್ಶನ ಪಡೆದಿದ್ದರು.
ನಿನ್ನೆ ಶುಕ್ರವಾರ ಹಿನ್ನೆಲೆ ಕೊಲ್ಹಾಪುರ ಮಹಾಲಕ್ಷ್ಮಿ ದೇವಸ್ಥಾನಕ್ಕೆ ರಮೇಶ್ ಜಾರಕಿಹೊಳಿ ಭೇಟಿ ನೀಡಿದ್ದರು. ಇವರಿಗೆ ಮಾಜಿ ಶಾಸಕ ಸಂಜಯ ಪಾಟೀಲ್ ಸಾಥ್ ನೀಡಿದರು.