ಬೆಳಗಾವಿ: ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ವೀರರಾಣಿ ಕಿತ್ತೂರು ಚೆನ್ನಮ್ಮ ಎಂದು ಹೆಸರಿಡುವಂತೆ ಕೇಂದ್ರ ರೈಲ್ವೆ ರಾಜ್ಯ ಸಚಿವ ಸುರೇಶ ಅಂಗಡಿ ಬೆಳಗಾವಿ ಡಿಸಿ ಎಸ್.ಬಿ.ಬೊಮ್ಮನಹಳ್ಳಿ ಅವರಿಗೆ ಪತ್ರ ಬರೆದಿದ್ದಾರೆ.
ರೈಲ್ವೆ ನಿಲ್ದಾಣಕ್ಕೆ ರಾಣಿಚೆನ್ನಮ್ಮ ಹೆಸರಿಡುವ ಸಂಬಂಧ ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. 2017ರ ಸೆ.14ರಂದು ಅಂದಿನ ಸಿಎಂ ಸಿದ್ದರಾಮಯ್ಯಗೆ ಮನವಿ ಸಲ್ಲಿಸಲಾಗಿತ್ತು. ಆದರೆ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಈ ಹಿನ್ನೆಲೆಯಲ್ಲಿ ಮತ್ತೊಮ್ಮೆ ಪ್ರಸ್ತಾವನೆ ಸಲ್ಲಿಸುವಂತೆ ಜಿಲ್ಲಾಡಳಿತಕ್ಕೆ ಸಲಹೆ ನೀಡಿದ್ದಾರೆ. ಬೆಳಗಾವಿ ಡಿಸಿಗೆ ಪತ್ರ ಬರೆದ ಕುರಿತು ಸಚಿವ ಸುರೇಶ ಅಂಗಡಿ ಟ್ವೀಟ್ ಮಾಡಿದ್ದಾರೆ.
-
ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣವನ್ನು ವೀರ ರಾಣಿ ಕಿತ್ತೂರು ಚೆನ್ನಮ್ಮ ವಿಮಾನ ನಿಲ್ದಾಣ ಎಂದು ಮರುನಾಮಕರಣ ಮಾಡಬೇಕೆಂದು ಜಿಲ್ಲಾಧಿಕಾರಿಗಳಾದ ಡಾ. ಎಸ್.ಬಿ ಬೊಮ್ಮನಹಳ್ಳಿ ಅವರಿಗೆ ಮನವಿ ಸಲ್ಲಿಸಲಾಯಿತು. pic.twitter.com/oOJ4EFkYDF
— Suresh Angadi (@SureshAngadi_) January 15, 2020 " class="align-text-top noRightClick twitterSection" data="
">ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣವನ್ನು ವೀರ ರಾಣಿ ಕಿತ್ತೂರು ಚೆನ್ನಮ್ಮ ವಿಮಾನ ನಿಲ್ದಾಣ ಎಂದು ಮರುನಾಮಕರಣ ಮಾಡಬೇಕೆಂದು ಜಿಲ್ಲಾಧಿಕಾರಿಗಳಾದ ಡಾ. ಎಸ್.ಬಿ ಬೊಮ್ಮನಹಳ್ಳಿ ಅವರಿಗೆ ಮನವಿ ಸಲ್ಲಿಸಲಾಯಿತು. pic.twitter.com/oOJ4EFkYDF
— Suresh Angadi (@SureshAngadi_) January 15, 2020ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣವನ್ನು ವೀರ ರಾಣಿ ಕಿತ್ತೂರು ಚೆನ್ನಮ್ಮ ವಿಮಾನ ನಿಲ್ದಾಣ ಎಂದು ಮರುನಾಮಕರಣ ಮಾಡಬೇಕೆಂದು ಜಿಲ್ಲಾಧಿಕಾರಿಗಳಾದ ಡಾ. ಎಸ್.ಬಿ ಬೊಮ್ಮನಹಳ್ಳಿ ಅವರಿಗೆ ಮನವಿ ಸಲ್ಲಿಸಲಾಯಿತು. pic.twitter.com/oOJ4EFkYDF
— Suresh Angadi (@SureshAngadi_) January 15, 2020
ರಾಜ್ಯದ 5 ವಿಮಾನ ನಿಲ್ದಾಣಗಳ ಮರು ನಾಮಕರಣಕ್ಕೆ ಸರ್ಕಾರ ಮುಂದಾಗಿದೆ. ಮಂಗಳೂರು, ಮೈಸೂರು, ಹುಬ್ಬಳ್ಳಿ, ಬೆಳಗಾವಿ, ಕಲಬುರಗಿ ಏರ್‌ಪೋರ್ಟ್ ಮರುನಾಮಕರಣಕ್ಕೆ ನಿರ್ಧರಿಸಲಾಗಿದೆ. ಐತಿಹಾಸಿಕ ವ್ಯಕ್ತಿಗಳನ್ನು ಗುರುತಿಸಿ ಮಾಹಿತಿ ಒದಗಿಸುವಂತೆ ಸರ್ಕಾರ ಡಿಸಿಗಳಿಗೆ ಪತ್ರ ಬರೆದಿದೆ. ಜ.7ರಂದು ಮೂಲಸೌಲಭ್ಯ ಅಭಿವೃದ್ಧಿ ಇಲಾಖೆ ಅಧೀನ ಕಾರ್ಯದರ್ಶಿ ಡಿಸಿಗಳಿಗೆ ಪತ್ರ ಬರೆದಿದ್ದಾರೆ. ಈ ಹಿನ್ನೆಲೆಯಲ್ಲಿ ರಾಣಿ ಚೆನ್ನಮ್ಮ ಹೆಸರನ್ನು ಶಿಫಾರಸು ಮಾಡುವಂತೆ ಅಂಗಡಿ ಪತ್ರದ ಮೂಲಕ ಕೋರಿದ್ದಾರೆ.