ಬೆಳಗಾವಿ: ಲೋಕಸಭಾ ಉಪಚುನಾವಣೆ ಪ್ರಚಾರಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ನಿನ್ನೆ ಸಿಎಂಗೆ ಜ್ವರ, ಸುಸ್ತು ಕಾಣಿಸಿಕೊಂಡಿತ್ತು. ಅವರು ವಾಸ್ತವ್ಯ ಹೂಡಿದ್ದ ಹೋಟೆಲ್ಗೆ ಮಹಾನಗರ ಪಾಲಿಕೆ ಸಿಬ್ಬಂದಿ ಸ್ಯಾನಿಟೈಸೇಷನ್ ಮಾಡಿದರು.
ನಗರದ ಕೊಲ್ಲಾಪುರ ಸರ್ಕಲ್ನಲ್ಲಿರುವ ಖಾಸಗಿ ಹೋಟೆಲ್ನಲ್ಲಿ ತಂಗಿರುವ ಸಿಎಂಗೆ ವೈದ್ಯರು ಹೋಟೆಲ್ನಲ್ಲೇ ಚಿಕಿತ್ಸೆ ನೀಡಿದ್ದಾರೆ. ಯುಕೆ- 27 ಹೋಟೆಲ್ನಲ್ಲಿ ವಿಶ್ರಾಂತಿ ಪಡೆದಿದ್ದ ಅವರು ವೈದ್ಯರ ಸಲಹೆ ಮೇರೆಗೆ ಮಾತ್ರೆ ಸೇವಿಸಿ, ಬಳಿಕ ಮೂಡಲಗಿ ಹಾಗೂ ಗೋಕಾಕ್ನಲ್ಲಿ ಪ್ರಚಾರ ನಡೆಸಿದ್ದರು.
ಇಂದು ಬೆಳಿಗ್ಗೆ ಖಾಸಗಿ ಹೋಟೆಲ್ ಸುತ್ತಮುತ್ತ ಸ್ಯಾನಿಟೈಸೇಷನ್ ಮಾಡಲಾಗಿದೆ. ಇಂದು ಬೆಳಗಾವಿ ನಗರದ ಹಲವು ಬಡಾವಣೆಗಳಲ್ಲಿ ಸಿಎಂ ಕ್ಯಾಂಪೇನ್ ನಡೆಸಲಿದ್ದಾರೆ. ಸದ್ಯ ಹೋಟೆಲ್ನಲ್ಲೇ ವಿಶ್ರಾಂತಿ ಪಡೆಯುತ್ತಿದ್ದಾರೆ.
ಇದನ್ನೂ ಓದಿ: ಕೊರೊನಾ ಪಜೀತಿ: ದೆಹಲಿಯ ಅತಿದೊಡ್ಡ ಸ್ಮಶಾನದಲ್ಲೂ ಅಂತ್ಯಕ್ರಿಯೆಗೆ ಜಾಗವಿಲ್ಲ!