ಬೆಳಗಾವಿ: ನಗರದ ಶಿವಬಸವ ನಗರದಲ್ಲಿರುವ ಎಸ್.ಜಿ. ಬಾಳೇಕುಂದ್ರಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಫೆ.28 ಮತ್ತು 29ರಂದು ಪ್ರಾದೇಶಿಕ ಉದ್ಯೋಗ ಮೇಳ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ತಿಳಿಸಿದರು.
ಈ ಬಗ್ಗೆ ಮಾಹಿತಿ ನೀಡಿದ ಅವರು, ಬೆಳಗಾವಿ ಮತ್ತು ಧಾರವಾಡ ಜಿಲ್ಲಾಡಳಿತ, ಜಿಲ್ಲಾ ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಸಹಯೋಗದಲ್ಲಿ ಬೆಳಗಾವಿ ಮತ್ತು ಧಾರವಾಡ ಜಿಲ್ಲೆಯ ಉದ್ಯೋಗಾಕಾಂಕ್ಷಿಗಳಿಗೆ ಸೂಕ್ತ ಉದ್ಯೋಗಾವಕಾಶ ಒದಗಿಸುವ ಉದ್ದೇಶದಿಂದ ಎರಡು ದಿನಗಳ ಬೃಹತ್ ಪ್ರಾದೇಶಿಕ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದರು.
ಐಟಿ - ಬಿಟಿ, ಆಟೋಮೊಬೈಲ್, ಮೆಕ್ಯಾನಿಕಲ್, ಮಾರ್ಕೆಟಿಂಗ್, ಸೇಲ್ಸ್ ಆ್ಯಂಡ್ ರಿಟೇಲ್, ಟೆಲಿಕಾಂ, ಬಿಪಿಒ, ಟೆಕ್ಸ್ಟೈಲ್, ಬ್ಯಾಂಕಿಂಗ್, ಫೈನಾನ್ಸ್, ಇನ್ಶೂರೆನ್ಸ್, ಹಾಸ್ಪಿಟಲ್, ಫಾರ್ಮಾಸಿಟಿಕಲ್, ಹೆಲ್ತ್ ಕೇರ್, ಮ್ಯಾನುಫ್ಯಾಕ್ಚರಿಂಗ್, ಟ್ರಾನ್ಸಪೋರ್ಟ್, ಹಾಸ್ಪಿಟ್ಯಾಲಿಟಿ, ಹೋಂ ನರ್ಸಿಂಗ್, ಆಹಾರ ಸಂಸ್ಕರಣೆ, ಜವಳಿ, ಭದ್ರತೆ ಸೇರಿದಂತೆ ವಿವಿಧ ಕಂಪನಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಲಿವೆ ಎಂದು ತಿಳಿಸಿದರು.