ETV Bharat / state

ಆಸ್ತಿ ವಿವಾದ ಹಿನ್ನೆಲೆ ಸಂಬಂಧಿಕರಿಂದ ತಾಯಿ, ಮಗಳ ಮೇಲೆ ಹಲ್ಲೆ ಆರೋಪ - Assault on mother and daughter

ಆಸ್ತಿ ವಿವಾದ ಹಿನ್ನೆಲೆಯಲ್ಲಿ ಮಹಿಳೆ ಹಾಗೂ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿ ಮೇಲೆ ಹಲ್ಲೆ ಮಾಡಿರುವ ಘಟನೆ ಘಟನಟ್ಟಿ ಗ್ರಾಮದಲ್ಲಿ ನಡೆದಿದೆ.

Assault on mother and daughter
ಸಂಬಂಧಿಕರಿಂದ ತಾಯಿ, ಮಗಳ ಮೇಲೆ ಮಾರಣಾಂತಿಕ ಹಲ್ಲೆ
author img

By

Published : Feb 25, 2023, 6:22 AM IST

ಬೆಳಗಾವಿ: ಆಸ್ತಿ ವಿವಾದ ಹಿನ್ನೆಲೆಯಲ್ಲಿ ಮಹಿಳೆ ಹಾಗೂ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿ ಮೇಲೆ ಹಲ್ಲೆ ಮಾಡಿರುವ ಘಟನೆ ಚಿಕ್ಕೋಡಿ ಸಮೀಪದ ಘಟನಟ್ಟಿ ಗ್ರಾಮದಲ್ಲಿ ಸಂಭವಿಸಿದೆ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಘಟನಟ್ಟಿ ಗ್ರಾಮದ ಕಳೆದ ಮೂರು ದಿನದ ಹಿಂದೆ ಆಸ್ತಿ ವಿವಾದ ಹಿನ್ನೆಲೆ ನಡೆದ ಜಗಳ ವಿಕೋಪಕ್ಕೆ ತಿರುಗಿದೆ. ಈ ವೇಳೆ ಶಾಂತವ್ವ ನಾಗಪ್ಪ ಮಾಂಗ್ ಹಾಗೂ ಅವರ ಮಗಳಾದ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿ ಮೇಲೆ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ಶಾಂತವ್ವ ನಾಗಪ್ಪ ಮಾಂಗ್ ಅವರ ಪತಿ ಮೃತಪಟ್ಟಿದ್ದಾರೆ. ''ಮೃತ ನಾಗಪ್ಪ ಮಾಂಗ ಎಂಬುವರ ಸಹೋದರಾದ ಲಕ್ಕಪ್ಪ ಬಾಬು ಮಾಂಗ, ಭೀಮಪ್ಪ ಲಕ್ಕಪ್ಪ ಮಾಂಗ, ಹಣಮಂತ ಲಕ್ಕಪ್ಪ ಮಾಂಗ ಎಂಬುವವರು ಜಮೀನು ವಶಪಡಿಸಿಕೊಳ್ಳಲು ನಮ್ಮ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಹಲ್ಲೆಗೊಳಗಾದ ಮಹಿಳೆ ಶಾಂತವ್ವ ಮಾಂಗ ಆರೋಪಿಸಿದ್ದಾರೆ.

''ಈ ಕುರಿತು ಅಥಣಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆದಷ್ಟು ಬೇಗ ಆರೋಪಿಗಳನ್ನು ಬಂಧಿಸಿ, ನಮಗೆ ನ್ಯಾಯ ಒದಗಿಸಬೇಕು'' ಎಂದು ಶಾಂತವ್ವ ಮಾಂಗ ಹಿರಿಯ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಹಲ್ಲೆಗೆ ಒಳಗಾಗಿರುವ ಸಂತ್ರಸ್ತರಿಗೆ ಅಥಣಿ ಸಮುದಾಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಏಳು ಜನರನ್ನು ಬಂಧಿಸಿದ ಪೊಲೀಸರು( ಕಡಬ): ಇನ್ನೊಂದೆಡೆ ಗುರುವಾರ ರಾತ್ರಿ ನಡೆದ ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ದಕ್ಷಿಣ ಕನ್ನಡ ಜಿಲ್ಲೆಯ ಕೊಂಬಾರಿನ ಮಂಡೆಕರ ಬಳಿ ಪೊಲೀಸ್ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳ ಮೇಲೆ ಹಲ್ಲೆ ಮಾಡಿ, ಸರ್ಕಾರಿ ವಾಹನಗಳಿಗೆ ಹಾನಿಗೊಳಿಸಿದ ಆರೋಪದಡಿ ಏಳು ಜನರನ್ನು ಕಡಬ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಕೊಂಬಾರು ಗ್ರಾಮದ ಕಮರ್ಕಜೆ ನಿವಾಸಿಗಳಾದ ಉಮೇಶ್, ರಾಜೇಶ್, ಕೋಕಿಲಾನಂದ, ಕೋಲ್ಪೆ‌ ನಿವಾಸಿಗಳಾದ ಜನಾರ್ದನ್ ರೈ, ತೀರ್ಥಕುಮಾರ್, ಬಾರ್ಯ ನಿವಾಸಿ ಗಂಗಾಧರ್ ಗೌಡ, ರೆಂಜಾಳ ನಿವಾಸಿ ಅಜಿತ್‌ಕುಮಾರ್ ಎಂದು ಗುರುತಿಸಲಾಗಿದೆ.

ಬಂಧಿತರು ಗುರುವಾರ ರಾತ್ರಿ ಕೊಂಬಾರು ಅರಣ್ಯ ಪ್ರದೇಶದಲ್ಲಿ ಸೆರೆಸಿಕ್ಕಿದ ಕಾಡಾನೆಯನ್ನು ಅರಣ್ಯಾಧಿಕಾರಿಗಳು ವಾಹನದಲ್ಲಿ ಸಾಗಿಸುತ್ತಿದ್ದ ವೇಳೆ ಸ್ಥಳಕ್ಕೆ ಬಂದ ಲಾರಿ ತಡೆದಿದ್ದಾರೆ. ಅಲ್ಲದೇ ಹಿಡಿದಿರುವ ಆನೆಯನ್ನು ಇಲ್ಲಿಯೇ ನಿಲ್ಲಿಸಿ, ಇತರ ಕಾಡಾನೆಗಳನ್ನು ಸೆರೆಹಿಡಿದು ಒಟ್ಟಿಗೆ ಎಲ್ಲಾ ಆನೆಗಳನ್ನು ಕೊಂಡೊಯ್ಯಬೇಕೆಂದು ಪಟ್ಟು ಹಿಡಿದಿದ್ದಾರೆ.

ಅರಿವಳಿಕೆ ಮದ್ದು ನೀಡಿ ಹಿಡಿದಿರುವ ಕಾಡಾನೆಯನ್ನು ಹೆಚ್ಚು ಸಮಯ ಲಾರಿಯಲ್ಲಿ ನಿಲ್ಲಿಸಲು ಆಗುವುದಿಲ್ಲ. ಅದಕ್ಕೆ ಕೂಡಲೇ ಹೆಚ್ಚಿನ ಚಿಕಿತ್ಸೆ ನೀಡಬೇಕಾಗುತ್ತದೆ. ನಾವು ಮೊದಲು ಸೆರೆಹಿಡಿದ ಆನೆಯನ್ನು ಬಿಟ್ಟು ಬಂದು ನಂತರ ಕಾರ್ಯಾಚರಣೆ ನಡೆಸಿ ಉಳಿದ ಕಾಡಾನೆಗಳನ್ನು ಸೆರೆಹಿಡಿಯುವುದಾಗಿ ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.ಇದಕ್ಕೊಪ್ಪದ ಆರೋಪಿಗಳು ಈಗಲೇ ಉಳಿದ ಆನೆಗಳನ್ನು ಸೆರೆ ಹಿಡಿಯುವಂತೆ ಒತ್ತಾಯಿಸಿದ್ದಾರೆ.

ಈ ವೇಳೆ ಅರಣ್ಯಾಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದು, ಅವರು ಸ್ಥಳಕ್ಕೆ ಬಂದು ಈ ಏಳು ಜನರಿಗೆ ತಿಳುವಳಿಕೆ ಹೇಳಿದ್ದಾರೆ. ಕೋಪಗೊಂಡ ಆರೋಪಿಗಳು ಕರ್ತವ್ಯದಲ್ಲಿದ್ದ ಪೊಲೀಸರು ಮತ್ತು ಅರಣ್ಯ ಸಿಬ್ಬಂದಿಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಅಲ್ಲದೇ ಸ್ಥಳದಲ್ಲಿ ನಿಲ್ಲಿಸಿದ್ದ ಅರಣ್ಯ ಇಲಾಖೆ ವಾಹನ ಹಾಗೂ ಪೊಲೀಸ್ ವಾಹನಗಳ ಮೇಲೂ ಕಲ್ಲು ತೂರಾಟ ಮಾಡಿ ವಾಹನಗಳನ್ನು ಜಖಂ ಮಾಡಿದ್ದಾರೆ.

ಇದನ್ನೂ ಓದಿ: ಕಡಬ: ಕರ್ತವ್ಯನಿರತ ಅರಣ್ಯ, ಪೊಲೀಸ್ ಅಧಿಕಾರಿಗಳ ಮೇಲೆ ಹಲ್ಲೆ; 7 ಮಂದಿ ಬಂಧನ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.