ETV Bharat / state

ಕ್ವಾರಂಟೈನ್ ಅವಧಿ ಪೂರ್ಣ: ಬೆಳಗಾವಿಯಲ್ಲಿ 121 ಜನರು ಮನೆಗೆ

ಬೆಳಗಾವಿಯ ಕ್ವಾರಂಟೈನ್ ಕೇಂದ್ರದಲ್ಲಿದ್ದ 87 ಹಾಗೂ ರಾಯಬಾಗ ತಾಲ್ಲೂಕಿನಲ್ಲಿದ್ದ 34 ಜನರನ್ನು ಮನೆಗೆ ಕಳುಹಿಸಲಾಗಿದೆ. ಎಲ್ಲರೂ ಹದಿನಾಲ್ಕು ದಿನಗಳ ಇನ್ಸ್ಟಿಟ್ಯೂಷನಲ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ‌.ಎಸ್.ಬಿ.ಬೊಮ್ಮನಹಳ್ಳಿ ತಿಳಿಸಿದ್ದಾರೆ.

Release 121 people from Quarantine Center In Belgaum
ಬೆಳಗಾವಿಯಲ್ಲಿ 121 ಜನರು ಮನೆಗೆ
author img

By

Published : Apr 27, 2020, 8:44 AM IST

Updated : Apr 27, 2020, 10:00 AM IST

ಬೆಳಗಾವಿ: ಕೋವಿಡ್-19 ಸೋಂಕಿತರ ಜತೆ ಪ್ರಾಥಮಿಕ ಸಂಪರ್ಕ ಹೊಂದಿದ್ದ ಕಾರಣಕ್ಕೆ ಇನ್ಸ್ಟಿಟ್ಯೂಷನಲ್ ಕ್ವಾರಂಟೈನ್ ನಲ್ಲಿದ್ದ 121 ಜನರನ್ನು ಇಂದು ಕ್ವಾರಂಟೈನ್ ಕೇಂದ್ರದಿಂದ ಬಿಡುಗಡೆಗೊಳಿಸಿ ಅವರವರ ಮನೆಗಳಿಗೆ ಕಳುಹಿಸಿಕೊಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ‌.ಎಸ್.ಬಿ.ಬೊಮ್ಮನಹಳ್ಳಿ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಡಾ‌.ಎಸ್.ಬಿ.ಬೊಮ್ಮನಹಳ್ಳಿ

ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಳಗಾವಿಯ ಕ್ವಾರಂಟೈನ್ ಕೇಂದ್ರದಲ್ಲಿದ್ದ 87 ಹಾಗೂ ರಾಯಬಾಗ ತಾಲೂಕಿನಲ್ಲಿದ್ದ 34 ಜನರನ್ನು ಮನೆಗೆ ಕಳುಹಿಸಲಾಗಿದೆ. ಎಲ್ಲರೂ ಹದಿನಾಲ್ಕು ದಿನಗಳ ಇನ್ಸ್ಟಿಟ್ಯೂಷನಲ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿರುತ್ತಾರೆ. ಈ ಅವಧಿಯಲ್ಲಿ ಇವರ ಗಂಟಲು ದ್ರವದ ಮಾದರಿಗಳನ್ನು ಪ್ರಯೋಗಾಲಯಕ್ಕೆ ಕಳಿಸಲಾಗಿತ್ತು. ಎಲ್ಲ ವರದಿಗಳು ನೆಗೆಟಿವ್ ಬಂದಿರುವುದರಿಂದ ಅವರನ್ನು ಮನೆಗೆ ಕಳಿಸಲಾಯಿತು ಎಂದು ತಿಳಿಸಿದರು.

ಇನ್ಸ್ಟಿಟ್ಯೂಷನಲ್ ಕ್ವಾರಂಟೈನ್ ಅವಧಿ ಪೂರ್ಣಗೊಂಡಿದ್ದರೂ ಅವರವರ ಮನೆಯಲ್ಲಿಯೇ ಮುಂದಿನ ಹದಿನಾಲ್ಕು ದಿನಗಳವರೆಗೆ ಕ್ವಾರಂಟೈನ್ ಇರಬೇಕಾಗುತ್ತದೆ. ಹೀಗೆ ಮನೆಯಲ್ಲಿ ಇರುವವರ ಮೇಲೆ ಮೊಬೈಲ್ ಆಪ್ ಮೂಲಕ ನಿಗಾ ವಹಿಸಲಾಗುತ್ತದೆ. ಇದಲ್ಲದೇ ಆರೋಗ್ಯ ಇಲಾಖೆಯ ತಂಡಗಳು ಕೂಡ ಅವರ ಮನೆಗಳಿಗೆ ಭೇಟಿ ನೀಡಿ ಪರಿಶೀಲಿಸಲಿದ್ದಾರೆ ಎಂದರು.

ಆರೋಗ್ಯ, ಕಂದಾಯ, ಪೊಲೀಸ್​​ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಯ ಅವಿರತ ಶ್ರಮದ ಫಲವಾಗಿ ಸೋಂಕಿತರು ಹಾಗೂ ಪ್ರಾಥಮಿಕ ಸಂಪರ್ಕಕ್ಕೆ ಬಂದವರು ಗುಣಮುಖರಾಗುತ್ತಿದ್ದಾರೆ. ಮನೆಗಳಿಗೆ ತೆರಳಿರುವವರು ಕಡ್ಡಾಯವಾಗಿ ಹದಿನಾಲ್ಕು ದಿನಗಳ ಕಾಲ ಹೋಮ್ ಕ್ವಾರಂಟೈನ್ ಮಾರ್ಗಸೂಚಿ ಹಾಗೂ ಅಧಿಕಾರಿಗಳ ನಿರ್ದೇಶನಗಳನ್ನು ಚಾಚೂ ತಪ್ಪದೆ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಮನವಿ ಮಾಡಿಕೊಂಡಿದ್ದಾರೆ.

Last Updated : Apr 27, 2020, 10:00 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.