ಬೆಳಗಾವಿ: ಪ್ರವಾಹದಿಂದ ಹಾನಿಗೊಳಗಾದ ಗೋಕಾಕ್ ತಾಲೂಕಿನ ಹಳ್ಳಿಗಳ ಜನರಿಗೆ ಶಾಶ್ವತ ಪರಿಹಾರ ನೀಡಬೇಕು ಎಂದು ಬಿಜೆಪಿ ಮುಖಂಡ ಅಶೋಕ್ ಪೂಜಾರಿ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಗೋಕಾಕ್ ನಗರದ ಅವರ ಕಾರ್ಯಾಲಯದಲ್ಲಿ ಮಾತನಾಡಿದ ಅಶೋಕ್ ಪೂಜಾರಿ, ಕಳೆದ ನೂರು ವರ್ಷಗಳ ಅವಧಿಯಲ್ಲಿ ಎಂದೂ ಕಾಣದ ಭೀಕರ ಪ್ರವಾಹ ಉಂಟಾಗಿದೆ. ತ್ವರಿತವಾಗಿ ಜನರಿಗೆ ಪುನರ್ವಸತಿ ಕಲ್ಪಿಸಬೇಕು. ಜೊತೆಗೆ ಸಂತ್ರಸ್ತರನ್ನು ಬೇರೆಡೆಗೆ ಸ್ಥಳಾಂತರಿಸಬೇಕು ಎಂದು ಸರ್ಕಾರವನ್ನು ಆಗ್ರಹಿಸಿದರು. ಪ್ರವಾಹ ಪೀಡಿತ ಪ್ರದೇಶಗಳಿಗೆ ಸರ್ಕಾರ ಆದಷ್ಟು ಬೇಗ ಪರಿಹಾರ ನೀಡಬೇಕು. ಒಂದು ವೇಳೆ ಪರಿಹಾರ ನೀಡುವಲ್ಲಿ ವಿಳಂಬ ನೀತಿ ಅನುಸರಿಸಿದರೆ ಸರ್ಕಾರದ ವಿರುದ್ಧ ಹೋರಾಟ ಮಾಡಲಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಗೋಕಾಕ್ ನಗರದಲ್ಲಿ ಇನ್ನೂ ಅನೇಕ ಅಭಿವೃದ್ಧಿ ಕೆಲಸಗಳು ಆಗಬೇಕಾಗಿದೆ. ರಸ್ತೆಗಳು ಹದಗೆಟ್ಟಿದ್ದು ಆದಷ್ಟು ಬೇಗ ಅವುಗಳನ್ನು ಸರಿಪಡಿಸಬೇಕು ಎಂದಿದ್ದಾರೆ.