ಬೆಳಗಾವಿ: ಮಹಾಮಾರಿ ಕೊರೊನಾ ಎಫೆಕ್ಟ್ನಿಂದ ಸವದತ್ತಿಯ ರೇಣುಕಾ ಯಲ್ಲಮ್ಮ ದೇವಿ ದರ್ಶನ ನಿಷೇಧಿಸಲಾಗಿದೆ.
ಇಂದಿನಿಂದ ಎರಡು ವಾರಗಳ ಕಾಲ ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಸವದತ್ತಿಯ ರೇಣುಕಾ ಯಲ್ಲಮ್ಮ ದೇವಸ್ಥಾನ ಉತ್ತರ ಕರ್ನಾಟಕ ಭಾಗದ ಪ್ರಮುಖ ಧಾರ್ಮಿಕ ಕೇಂದ್ರ ಎಂಬ ಹೆಗ್ಗಳಿಕೆ ಪಡೆದಿದ್ದು, ಅಧಿಕ ಭಕ್ತರು ಇಲ್ಲಿಗೆ ಭೇಟಿ ನೀಡಿ ದೇವಿ ಆಶೀರ್ವಾದ ಪಡೆಯುತ್ತಾರೆ.
ಕೊರೊನಾ ಸೋಂಕು ಹರಡುವ ಭೀತಿ ಹಿನ್ನೆಲೆಯಲ್ಲಿ ಶ್ರೀಕ್ಷೇತ್ರದ ಗಡಿ ಪ್ರದೇಶಕ್ಕೆ ಹೊರ ರಾಜ್ಯಗಳ ವಾಹನ ಪ್ರವೇಶ ನಿಷೇಧಿಸಲಾಗಿದೆ, ಈ ಕುರಿತು ವ್ಯವಸ್ಥಾಪನಾ ಸಮಿತಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಆದ್ರೆ ಮುಂಜಾಗ್ರತಾ ಕ್ರಮ ವಹಿಸಿ ಸಿಬ್ಬಂದಿ, ಅರ್ಚಕರಿಂದ ಎಂದಿನಂತೆ ಪೂಜೆ ನಡೆಯಲಿದೆ. ಆದರೆ 2 ವಾರ ಯಾವುದೇ ಭಕ್ತರಿಗೆ ದೇವಿಯ ದರ್ಶನಕ್ಕೆ ಅವಕಾಶ ಇಲ್ಲ. ಹಾಗಾಗಿ ಭಕ್ತಾದಿಗಳು ಸವದತ್ತಿ ಯಲ್ಲಮ್ಮ ಕ್ಷೇತ್ರಕ್ಕೆ ಬಾರದಂತೆ ರೇಣುಕಾ ಯಲ್ಲಮ್ಮ ದೇವಸ್ಥಾನ ಕಾರ್ಯನಿರ್ವಾಹಕ ಅಧಿಕಾರಿ ರವಿ ಕೋಟಾರಗಸ್ತಿ ವಿನಂತಿ ಮಾಡಿದ್ದಾರೆ.