ETV Bharat / state

5 ವರ್ಷದಿಂದ ಮನವಿ ಕೊಡ್ತಾನೆ ಇದೀವಿ.. ಹೇಳ್ರೀ, ಶುದ್ಧ ಕುಡಿಯೋ ನೀರು ಕೊಡ್ತೀರಿ ಯಾವಾಗ?

author img

By

Published : Oct 15, 2019, 5:46 PM IST

ಬೆಳಗಾವಿ ಜಿಲ್ಲೆಯ ಅತ್ತಿವಾಡ ಗ್ರಾಮದಲ್ಲಿ ಕುಡಿಯುವ ನೀರು, ಸಾರಿಗೆ ವ್ಯವಸ್ಥೆ ಸೇರಿ ಹಲವಾರು ಮೂಲಸೌಲಭ್ಯಗಳ ಕೊರತೆ ಇದ್ದು ಕೂಡಲೇ ಜಿಲ್ಲಾಡಳಿತ ಸೂಕ್ತ ಕ್ರಮಕೈಗೊಳ್ಳಬೇಕೆಂದು ಗ್ರಾಮಸ್ಥರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

ಶುದ್ಧ ಕುಡಿಯುವ ನೀರು ನೀಡುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ರು ಅತ್ತಿವಾಡ ಗ್ರಾಮಸ್ಥರು

ಬೆಳಗಾವಿ : ಜಿಲ್ಲೆಯ ಅತ್ತಿವಾಡ ಗ್ರಾಮದಲ್ಲಿ ಕುಡಿಯುವ ನೀರು, ಸಾರಿಗೆ ವ್ಯವಸ್ಥೆ ಸೇರಿ ಹಲವಾರು ಮೂಲಸೌಲಭ್ಯಗಳ ಕೊರತೆ ಇದ್ದು ಕೂಡಲೇ ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಜಮಾಯಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.
ಕರ್ನಾಟಕ-ಮಹಾರಾಷ್ಟ್ರದ ಗಡಿಭಾಗದ ಅತ್ತಿವಾಡ ಗ್ರಾಮದಲ್ಲಿ ಸುಮಾರು 3000ಕ್ಕೂ ಹೆಚ್ಚು ಜನರು ವಾಸಿಸುತ್ತಿದ್ದಾರೆ. ಹಲವಾರು ಸಮಸ್ಯೆಗಳಿಂದ ಜನ ಬಳಲುತ್ತಿದ್ದಾರೆ. ಶುದ್ದ ಕುಡಿಯುವ ನೀರಿನ ಪೂರೈಕೆ ಇಲ್ಲದಿರುವುದರಿಂದ ವಾಂತಿ, ಬೇಧಿ ಹಾಗೂ ಕಾಮಾಲೆ ಮತ್ತು ಇನ್ನಿತರ ಮಾರಣಾಂತಿಕ ಖಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ. ಆದಷ್ಟು ಬೇಗ ಸಮಸ್ಯೆಗಳಿಗೆ ಪರಿಹಾರ ನೀಡಬೇಕು ಎಂದು ಜಿಲ್ಲಾಧಿಕಾರಿಯನ್ನು ಒತ್ತಾಯಿಸಿದರು.

ಶುದ್ಧ ಕುಡಿಯುವ ನೀರು ಸೇರಿ ಮೂಲಸೌಲಭ್ಯಕ್ಕಾಗಿ ಆಗ್ರಹಿಸಿ ಅತ್ತಿವಾಡ ಗ್ರಾಮಸ್ಥರಿಂದ ಪ್ರತಿಭಟನೆ
ಅತ್ತಿವಾಡ ಸುತ್ತಮುತ್ತಲಿನ ರಸ್ತೆಗಳು ಸಂಪೂರ್ಣವಾಗಿ ಹದಗೆಟ್ಟಿದ್ದು ವಾಹನ ಸಂಚಾರವು ನಿಂತು ಹೋಗಿದೆ. ಶಾಲೆಗಳಲ್ಲಿ ಶಿಕ್ಷಕರ ಕೊರತೆಯೂ ತಾಂಡವವಾಡುತ್ತಿದೆ. ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಕಳೆದ ನಾಲ್ಕೈದು ವರ್ಷಗಳಿಂದ ತಹಶೀಲ್ದಾರರಿಗೆ ಮತ್ತು ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಆದ್ದರಿಂದ ಜಿಲ್ಲಾಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಸಮಸ್ಯೆಗಳಿಗೆ ಸೂಕ್ತ ಪರಿಹಾರ ನೀಡಬೇಕೆಂದು ಮನವಿಯ ಮೂಲಕ ಆಗ್ರಹಿಸಿದರು.

Intro:ಶುದ್ಧ ಕುಡಿಯುವ ನೀರು ನೀಡುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ

ಬೆಳಗಾವಿ : ಗಡಿಬಾಗದಲ್ಲಿರುವ ಅತ್ತಿವಾಡ ಗ್ರಾಮದಲ್ಲಿ ಕುಡಿಯುವ ನೀರು, ಸಾರಿಗೆ ವ್ಯವಸ್ಥೆ ಸೇರಿದಂತೆ ಹಲವಾರು ಮೂಲಭೂತ ಸೌಲಭ್ಯಗಳ ಕೊರತೆ ಇದ್ದು ಕೂಡಲೇ ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಅತ್ತಿವಾಡ ಗ್ರಾಮಸ್ಥರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

Body:ನಗರದ ಜಿಲ್ಲಾಧಿಕಾರಿಗಳ ಕಛೇರಿ ಆವರಣದಲ್ಲಿ ಜಮಾಯಿಸಿದ ಅತ್ತಿವಾಡ ಗ್ರಾಮದ ಗ್ರಾಮಸ್ಥರು.
ಕರ್ನಾಟಕ ಹಾಗೂ ಮಹಾರಾಷ್ಟ್ರದ ಗಡಿಭಾಗದಲ್ಲಿ ಬರುವ ಅತ್ತಿವಾಡ ಗ್ರಾಮದಲ್ಲಿ ಸುಮಾರು 3000 ಕ್ಕೂ ಹೆಚ್ಚು ಜನರು ವಾಸಿಸುತ್ತಿದ್ದು ಹಲವಾರು ಮೂಲಭೂತ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಶುದ್ದ ಕುಡಿಯುವ ನೀರಿನ ಪೂರೈಕೆ ಇಲ್ಲದಿರುವುದರಿಂದ ವಾಂತಿ, ಬೇಧಿ, ಹಾಗೂ ಕಾಮಾಲೆ ಜ್ವರ ಮತ್ತು ಇನ್ನಿತರ ಮಾರಣಾಂತಿಕ ಖಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ ಆದಷ್ಟು ಬೇಗ ಸಮಸ್ಯೆಗಳಿಗೆ ಪರಿಹಾರ ನೀಡಬೇಕು ಎಂದು ಜಿಲ್ಲಾಧಿಕಾರಿಯನ್ನು ಒತ್ತಾಯಿಸಿದರು.

Conclusion:ಅತ್ತಿವಾಡ ಸುತ್ತಮುತ್ತಲಿನ ರಸ್ತೆಗಳು ಸಂಪೂರ್ಣವಾಗಿ ಹದಿಗೆಟ್ಟಿದ್ದು ವಾಹನ ಸಂಚಾರವು ನಿಂತುಹೋಗಿದೆ. ಶಾಲೆಗಳಲ್ಲಿ ಶಿಕ್ಷಕರ ಕೊರತೆಯೂ ತಾಂಡವಾಡುತ್ತಿದೆ ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಕಳೆದ ನಾಲ್ಕೈದು ವರ್ಷಗಳಿಂದ ತಹಸಿಲ್ದಾರರಿಗೆ ಮತ್ತು ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ ಅದ್ದರಿಂದ ಜಿಲ್ಲಾಧಿಕಾರಿಗಳು ಗ್ರಾಮಕ್ಕೆ ಬೇಟಿ ನೀಡಿ ಸಮಸ್ಯೆಗಳಿಗೆ ಸೂಕ್ತ ಪರಿಹಾರ ನೀಡಬೇಕೆಂದು ಮನವಿಯ ಮೂಲಕ ಆಗ್ರಹಿಸಿದರು.

ವಿನಾಯಕ ಮಠಪತಿ
ಬೆಳಗಾವಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.