ಬೆಳಗಾವಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ಸಂಯುಕ್ತ ಕಿಸಾನ್ ಮೋರ್ಚಾ ರೈತ ಸಂಘಟನೆ ಕರೆ ನೀಡಿದ್ದ ಭಾರತ್ ಬಂದ್‌ಗೆ ಕುಂದಾನಗರಿಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಸಂಯುಕ್ತ ಕಿಸಾನ್ ಮೋರ್ಚಾ ರೈತ ಸಂಘಟನೆ ಕರೆ ನೀಡಿರುವ ಭಾರತ್ ಬಂದ್‌ಗೆ ರಾಜ್ಯದಲ್ಲೂ ಹಲವು ಸಂಘಟನೆಗಳು ಬೆಂಬಲ ಸೂಚಿಸಿದ್ದವು. ಆದರೆ, ನಗರದಲ್ಲಿ ಮಾತ್ರ ಜನಜೀವನ ಎಂದಿನಂತೆ ಸಾಗಿದೆ.
ಎಂದಿನಂತೆ ಕೆಎಸ್ಆರ್ಟಿಸಿ ಬಸ್, ಆಟೋ ಸಂಚಾರ ಸೇರಿದಂತೆ ವಾಹನ ಸಂಚಾರ ನಡೆಯುತ್ತಿದೆ. ಸಾರ್ವಜನಿಕರು ನಿತ್ಯದಂತೆ ತಮ್ಮ ಕೆಲಸ ಕಾರ್ಯಗಳಿಗೆ ತೆರಳುತ್ತಿದ್ದಾರೆ. ಇದಲ್ಲದೇ ಮಹಾನಗರದಲ್ಲಿರುವ ಅಂಗಡಿ - ಮುಗ್ಗಟ್ಟುಗಳು, ಹೋಟೆಲ್ಗಳು ಸೇರಿದಂತೆ ಮಾರುಕಟ್ಟೆಯಲ್ಲಿ ಎಂದಿನಂತೆ ವ್ಯಾಪಾರ ವಹಿವಾಟು ನಡೆಯುತ್ತಿದೆ.