ಬೆಳಗಾವಿ: ಕೋವಿಡ್ ಕಾರಣಕ್ಕೆ ಮತ್ತೆ ಒಂದು ತಿಂಗಳ ಕಾಲ ಸವದತ್ತಿ ರೇಣುಕಾ ಯಲ್ಲಮ್ಮ ದೇವಿ ದರ್ಶನಕ್ಕೆ ನಿಷೇಧ ಹೇರಿ ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಆದೇಶ ಹೊರಡಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಗುಡ್ಡದಲ್ಲಿರುವ ಶ್ರೀ ಯಲ್ಲಮ್ಮನ ದೇವಸ್ಥಾನಕ್ಕೆ ಭಕ್ತರು ಬರದಂತೆ ಮತ್ತೆ ಒಂದು ತಿಂಗಳ ಕಾಲ ಡಿ.31ರವರೆಗೆ ನಿಷೇಧ ವಿಸ್ತರಿಸಿ ಬೆಳಗಾವಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಇನ್ನು ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೆ ಮಹಾರಾಷ್ಟ್ರ ಸೇರಿದಂತೆ ಹೊರ ರಾಜ್ಯಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ಹೀಗಾಗಿ ಜನರ ಸುರಕ್ಷತೆಗಾಗಿ ನಿಷೇಧ ಮುಂದುವರೆಸಲಾಗಿದೆ. ಆದರೆ, ಇನ್ನೂ ಒಂದು ತಿಂಗಳ ಕಾಲ ದೇವಿ ದರ್ಶನಕ್ಕೆ ನಿಷೇಧ ಹೇರಿದ ಬೆಳಗಾವಿ ಜಿಲ್ಲಾಡಳಿತ ವಿರುದ್ಧ ಭಕ್ತರು ಆಕ್ರೋಶವ್ಯಕ್ತಪಡಿಸುತ್ತಿದ್ದಾರೆ. ಕಾರಣ, ಸಭೆ, ಸಮಾರಂಭಗಳಿಗೆ ಇಲ್ಲದ ಕೊರೊನಾ ಮಾರ್ಗಸೂಚಿಗಳು ಯಲ್ಲಮ್ಮನ ದೇವಿ ದರ್ಶನಕ್ಕೆ ಯಾಕೆ ಎನ್ನುತ್ತಿದ್ದಾರೆ. ಹೀಗಾಗಿ ಆದಷ್ಟು ಬೇಗೆ ಯಲ್ಲಮ್ಮ ದೇವಿಯ ದರ್ಶನ ಅವಕಾಶ ನೀಡಬೇಕು ಎಂಬುವುದು ಸಾರ್ವಜನಿಕರ ಆಗ್ರಹವಾಗಿದೆ.