ETV Bharat / state

ಪಿಎಂ - ಸಿಎಂ ಪರಿಹಾರ ನಿಧಿಗೆ 2.22 ಲಕ್ಷ ದೇಣಿಗೆ ನೀಡಿದ ನಿವೃತ್ತ ಆರೋಗ್ಯ ಮೇಲ್ವಿಚಾರಕ ಶಿವನಪ್ಪ - ಮುಖ್ಯಮಂತ್ರಿಗಳ ಪರಿಹಾರ ನಿಧಿ

ಜಿಲ್ಲೆಯ ನಿವೃತ್ತ ಆರೋಗ್ಯ ಮೇಲ್ವಿಚಾರಕ ಅಧಿಕಾರಿಯೊಬ್ಬರು ಕೋವಿಡ್-19 ನಿಯಂತ್ರಣಕ್ಕಾಗಿ ಪ್ರಧಾನ ಮಂತ್ರಿ ಮತ್ತು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಪ್ರತ್ಯೇಕವಾಗಿ ತಲಾ 1,11,000/- ರಂತೆ ಒಟ್ಟು 2,22,000 ರೂಪಾಯಿ ಚೆಕ್​ ನೀಡಿದ್ದಾರೆ.

PM-CM Relief Fund
ಪಿಎಂ-ಸಿಎಂ ಪರಿಹಾರ ನಿಧಿಗೆ 2.22 ಲಕ್ಷ ದೇಣಿಗೆ ನೀಡಿದ ನಿವೃತ್ತ ಆರೋಗ್ಯ ಮೇಲ್ವಿಚಾರಕ ಶಿವನಪ್ಪ
author img

By

Published : Apr 28, 2020, 5:35 PM IST

ಬೆಳಗಾವಿ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನಿವೃತ್ತ ಆರೋಗ್ಯ ಮೇಲ್ವಿಚಾರಕ ಶಿವನಪ್ಪ ಬಿ. ಖಣಗಣ್ಣಿಯವರು ಕೋವಿಡ್-19 ನಿಯಂತ್ರಣಕ್ಕಾಗಿ ಪ್ರಧಾನಮಂತ್ರಿ ಮತ್ತು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಪ್ರತ್ಯೇಕವಾಗಿ ತಲಾ 1,11,000/- ರಂತೆ ಒಟ್ಟು 2,22,000 ರೂಪಾಯಿ ಚೆಕ್​ನ್ನು ಜಿಲ್ಲಾಧಿಕಾರಿಗಳ ಮೂಲಕ ಸಲ್ಲಿಸಿದರು.

ಚೆಕ್ ಸ್ವೀಕರಿಸಿದ ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಅವರು, ಪರಿಹಾರ ನಿಧಿಗೆ ದೇಣಿಗೆ ನೀಡಿದ ನಿವೃತ್ತ ಆರೋಗ್ಯ ಮೇಲ್ವಿಚಾರಕರಾದ ಶಿವನಪ್ಪ ಬಿ. ಖಣಗಣ್ಣಿ ಅವರಿಗೆ ಇಲಾಖೆಯ ಪರವಾಗಿ ಅಭಿನಂದನೆ ಸಲ್ಲಿಸಿದರು. ನಿವೃತ್ತ ಆರೋಗ್ಯ ಮೇಲ್ವಿಚಾರಕರಾದ ಶಿವನಪ್ಪ ಬಿ. ಖಣಗಣ್ಣಿಯವರು ಬೆಳಗಾವಿ ಜಿಲ್ಲೆಯ ರಾಜ್ಯ ಸರ್ಕಾರಿ ನೌಕರರ ಕ್ರೀಡಾ ಕೂಟ ಹಾಗೂ ರಾಷ್ಟ್ರೀಯ ಮಟ್ಟದ ಕ್ರೀಡಾಕೂಟದ ಈಜು ಸ್ಪರ್ಧೆ, ರಾಜ್ಯ ಮಟ್ಟದ ಓಟ, ಅಥ್ಲೆಟಿಕ್, ಈಜು ಹಾಗೂ ಕುಸ್ತಿ ಸ್ಪರ್ಧೆಗಳಲ್ಲಿ ಭಾಗವಹಿಸಿ ಜಿಲ್ಲೆಗೆ ಕೀರ್ತಿ ತಂದಿದ್ದು, ಇದೀಗ ಸಮಾಜ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

ಆರೋಗ್ಯ ಇಲಾಖೆಯ ವಿಭಾಗೀಯ ಸಹ ನಿರ್ದೇಶಕ ಡಾ.ಅಪ್ಪಾಸಾಹೇಬ್ ನರಟ್ಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ವಿ.ಮುನ್ಯಾಳ, ಸಹಾಯಕ ಆಡಳಿತ ಅಧಿಕಾರಿ ರಮೇಶ ಮಡಿವಾಳ ಉಪಸ್ಥಿತರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.