ಬೆಳಗಾವಿ : ಜಿಲ್ಲೆಯಾದ್ಯಂತ ಸುರಿದ ಭೀಕರ ಮಳೆಗೆ ಅನೇಕ ರಸ್ತೆಗಳು ಕೊಚ್ಚಿ ಹೋಗಿದ್ದು, ಆದಷ್ಟು ಬೇಗ ರಸ್ತೆ ಸರಿಪಡಿಸುವಂತೆ ಕಂದಾಯ ಸಚಿವ ಆರ್.ಅಶೋಕ್ ಅಧಿಕಾರಿಗಳಿಗೆ ತರಾಟೆ ತೆಗೆದುಕೊಂಡಿದ್ದಾರೆ.
ಜಿಲ್ಲೆಯ ಬೈಲಹೊಂಗಲ ತಾಲೂಕಿನ ಗದ್ದಿಕೇರಿ ಗ್ರಾಮಕ್ಕೆ ಭೇಟಿ ನೀಡಿದ್ದ ಕಂದಾಯ ಸಚಿವ ಆರ್.ಅಶೋಕ್, ಪ್ರವಾಹದಲ್ಲಿ ಉಂಟಾದ ಹಾನಿಯ ವೀಕ್ಷಣೆ ಮಾಡಿದರು. ಇದೇ ಸಂದರ್ಭದಲ್ಲಿ ಕಳೆದ ಒಂದು ವಾರದ ಹಿಂದೆ ಸುರಿದ ಮಳೆಗೆ ಕೊಚ್ಚಿ ಹೋಗಿರುವ ಗದ್ದಿಕೇರಿ ರಸ್ತೆಯನ್ನು ಪರಿಶೀಲಿಸಿದ ಸಚಿವರು, ಕಳಪೆ ಕಾಮಗಾರಿ ಬಗ್ಗೆ ಅಧಿಕಾರಿಯನ್ನು ತರಾಟೆಗೆ ತಗೆದುಕೊಂಡರು. ಆದಷ್ಟು ಬೇಗ ರಸ್ತೆ ಸರಿಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜೊತೆಗೆ ತೋಟದ ಮನೆಗಳು ಮಳೆಗೆ ಬಿದ್ದಿವೆ. ಅಂತಹ ಮನೆಯ ಮಾಲೀಕರಿಗೆ ಪರಿಹಾರ ನೀಡಿಲ್ಲ ಎಂದು ಸಾರ್ವಜನಿಕರು ಸಚಿವರಿಗೆ ಹೇಳಿದಾಗ. ಯಾವುದೇ ಮನೆ ಮಳೆಗೆ ಅಥವಾ ಪ್ರವಾಹಕ್ಕೆ ಬಿದ್ದಿದ್ದರೆ ತ್ವರಿತವಾಗಿ ಅಂತಹವರಿಗೆ ಮನೆ ಕಟ್ಟಿಕೊಳ್ಳಲು ಸರ್ಕಾರದಿಂದ ಪರಿಹಾರ ನೀಡಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.