ETV Bharat / state

ಬೆಳಗಾವಿಯಲ್ಲಿ ಮುಂದುವರೆದ ಮಳೆ: ರಸ್ತೆ ಸಂಪರ್ಕಗಳು ಕಡಿತ

ಬೆಳಗಾವಿ ನಗರದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಜನರ ಸಂಕಷ್ಟಕ್ಕೀಡಾಗಿದ್ದಾರೆ. ಮಳೆಯ ಆರ್ಭಟದಿಂದಾಗಿ ಸೇತುವೆ, ರಸ್ತೆ ಸಂಪರ್ಕ ಹಾಗೂ ವಿದ್ಯುತ್ ಸಂಪರ್ಕ ಕೂಡಾ ಕಡಿತಗೊಂಡಿದೆ.

Road links cut off due to continued rain in Belgaum, ಬೆಳಗಾವಿಯಲ್ಲಿ ಮುಂದುವರೆದ ಮಳೆಯಿಂದಾಗಿ ರಸ್ತೆ ಸಂಪರ್ಕಗಳು ಕಡಿತ
author img

By

Published : Aug 4, 2019, 11:44 AM IST

ಬೆಳಗಾವಿ: ಕಳೆದ ಕೆಲವು ದಿನಗಳಿಂದ ಕುಂದಾನಗರಿಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆ ಅವಾಂತರ ಸೃಷ್ಟಿಸಿದೆ. ಜಿಲ್ಲೆಯ ಅನೇಕ ಭಾಗಗಳಲ್ಲಿ ಜನರು ಸಂಕಷ್ಟಕ್ಕೆ ಸಿಲುಕಿದ್ದು, ಗ್ರಾಮಗಳಿಗೆ ಸಂಪರ್ಕ ಕಲ್ಪಿಸುತ್ತಿದ್ದ ಸೇತುವೆಗಳು ಜಲಾವೃತವಾಗಿವೆ.

Road links cut off due to continued rain in Belgaum
ಬೆಳಗಾವಿಯಲ್ಲಿ ಮುಂದುವರೆದ ಮಳೆಯಿಂದಾಗಿ ರಸ್ತೆ ಸಂಪರ್ಕಗಳು ಕಡಿತ

ಬೆಳಗಾವಿ, ಖಾನಾಪುರ, ಕಿತ್ತೂರು, ಬೈಲಹೊಂಗಲ ತಾಲೂಕಿನಲ್ಲಿ ಹೆಚ್ಚಿನ ಮಳೆಯಾಗುತ್ತಿದ್ದು, ಜನಜೀವನ ಸಂಕಷ್ಟಕ್ಕೆ ಸಿಲುಕಿದೆ. ಖಾನಾಪುರ ತಾಲೂಕಿನ ಹಬ್ಬನಟ್ಟಿ ಗ್ರಾಮದ ಮಾರುತಿ ಮಂದಿರ ಸಂಪೂರ್ಣ ಜಲಾವೃತವಾಗಿದ್ದು, ದೇವಸ್ಥಾನದ ಕಳಸದವರೆಗೂ ನೀರು ಬಂದು ಮಂದಿರ ಮುಳುಗಡೆಯಾಗಿದೆ.

ಇನ್ನು ಖಾನಾಪುರ ತಾಲೂಕಿನಲ್ಲಿ ಹರಿಯುವ ಮಲಪ್ರಭಾ ನದಿ ಒಳಹರಿವು ಜಾಸ್ತಿಯಾಗಿದೆ. ತಾಲೂಕಿನ ಅಸೋಗಾ ಗ್ರಾಮದ ಸಂಪರ್ಕ ಕಡಿತವಾಗಿದ್ದು, ಸೇತುವೆ ಮೇಲೆ ನೀರು ಹರಿಯುತ್ತಿದೆ. ಅಷ್ಟೇ ಅಲ್ಲದೇ, ಅನೇಕ ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಕೂಡ ಕಡಿತ ಮಾಡಲಾಗಿದ್ದು, ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಇನ್ನು ಬೆಳಗಾವಿ ನಗರದಲ್ಲಿಯೂ ಮಳೆರಾಯನ ಆರ್ಭಟ ಮುಂದುವರೆದಿದ್ದು, ಜನರ ಪರಿಸ್ಥಿತಿ ಹೇಳತೀರದಾಗಿದೆ. ನಗರದ ಅನೇಕ ಮನೆಗಳಿಗೆ ಮಳೆ ನೀರು ನುಗ್ಗಿ ಜನರು ದಿನನಿತ್ಯದ ಕೆಲಸಕ್ಕೂ ತೊಂದರೆ ಅನುಭವಿಸುವಂತಾಗಿದೆ. ಜೊತೆಗೆ ನಗರಕ್ಕೆ ಹೊಂದಿಕೊಂಡಿರುವ ಕೃಷಿ ಗದ್ದೆಗಳಿಗಲ್ಲಿ ನೀರು ತುಂಬಿಕೊಂಡಿದ್ದು, ಅಪಾರ ಪ್ರಮಾಣದ ಬೆಳೆ ಹಾನಿ ಸಂಭವಿಸಿದೆ.

Intro:ಬೆಳಗಾವಿ ಜಿಲ್ಲೆಯಾದ್ಯಂತ ಮುಂದುವರೆದ ಮಳೆ ಅಬ್ಬದ : ರಸ್ತೆ ಸಂಪರ್ಕಗಳು ಕಡಿತ

ಬೆಳಗಾವಿ : ಕಳೆದ ಕೆಲವು ದಿನಗಳಿಂದ ಕುಂದಾನಗರಿಯಲ್ಲಿ ಸುರಿಯುತ್ತಿರುವ ಮಳೆ ಅವಾಂತರ ಸೃಷ್ಟಿಸಿದ್ದು, ಮಳೆ ಕಡಿಮೆಯಾಗುವ ಲಕ್ಷಣ ಕಂಡುಬರುತ್ತಿಲ್ಲ. ಜಿಲ್ಲೆಯ ಅನೇಕ ಭಾಗಗಳಲ್ಲಿ ಜನರು ಸಂಕಷ್ಟಕ್ಕೆ ಸಿಲುಕಿದ್ದು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುತ್ತಿದ್ದ ಸೇತುವೆಗಳು ಜಲಾವೃತವಾಗಿವೆ.

Body:ಬೆಳಗಾವಿ, ಖಾನಾಪುರ, ಕಿತ್ತೂರು, ಬೈಲಹೊಂಗಲ ತಾಲೂಕಿನಲ್ಲಿ ಭಾರಿ ಮಳೆಯಾಗುತ್ತಿದ್ದು ಜನಜೀವನ ಸಂಕಷ್ಟಕ್ಕೆ ಸಿಲುಕಿದೆ. ಖಾನಾಪುರ ತಾಲೂಕಿನ ಹಬ್ಬನಟ್ಟಿ ಗ್ರಾಮದ ಮಾರುತಿ ಮಂದಿರ ಸಂಪೂರ್ಣ ಜಲಾವೃತವಾಗಿದ್ದು ದೇವಸ್ಥಾನದ ಕಳಸದ ವರೆಗೂ ನೀರು ಬಂದಿದ್ದು ಮಂದಿರ ಮುಳುಗಡೆಯಾಗಿದೆ.

ಖಾನಾಪುರ ತಾಲೂಕಿನಲ್ಲಿ ಹರಿಯುವ ಮಲಪ್ರಭಾ ನದಿ ಒಳ ಹರಿವು ಜಾಸ್ತಿಯಾಗಿದೆ. ತಾಲೂಕಿನ ಅಸೋಗಾ ಗ್ರಾಮದ ಸಂಪರ್ಕ ಕಡಿತವಾಗಿದ್ದು.
ಸೇತುವೆ ಮೇಲೆ ನೀರು ಹರಿಯುತ್ತಿದೆ. ಈಗಾಗಲೆ ಅನೇಕ ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಕೂಡ ಕಡಿತ ಮಾಡಲಾಗಿದ್ದು ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ.
Conclusion:ಇನ್ನೂ ಬೆಳಗಾವಿ ನಗರದಲ್ಲಿಯೂ ಮಳೆರಾಯನ ಆರ್ಭಟ ಮುಂದುವರೆದಿದ್ದು ನಗರ ಜನರ ಪರಿಸ್ಥಿತಿ ಹೇಳತಿರದಂತಾಗಿದೆ. ನಗರದ ಅನೇಕ ಮನೆಗಳಿಗೆ ಮಳೆ ನೀರು ಹೊಕ್ಕಿದ್ದು ಜನರು ದಿನನಿತ್ಯದ ಕೆಲಸಕ್ಕೂ ತೊಂದರೆ ಅನುಭವಿಸುವಂತಾಗಿದೆ. ಜೊತೆಗೆ ನಗರಕ್ಕೆ ಹೊಂದಿಕೊಂಡಿರುವ ಕೃಷಿ ಗದ್ದೆಗಳಿಗಲ್ಲಿ ನೀರು ತುಂಬಿಕೊಂಡಿದ್ದು ಅಪಾರ ಪ್ರಮಾಣದ ಬೆಳೆ ಹಾನಿ ಸಂಭವಿಸಿದೆ.

ವಿನಾಯಕ ಮಠಪತಿ
ಬೆಳಗಾವಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.