ಬೆಳಗಾವಿ: ರಾಮದುರ್ಗ ಕ್ಷೇತ್ರದ ಬಿಜೆಪಿ ಶಾಸಕ ಮಹಾದೇವಪ್ಪ ಯಾದವಾಡ ಅವರ ಕಚೇರಿಗೆ ನುಗ್ಗಿರುವ ಕಳ್ಳರ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಶಾಸಕ ಮಹಾದೇವಪ್ಪ ಯಾದವಾಡ ಕಚೇರಿ ಕಳವು
ತಡರಾತ್ರಿ ಮುಸುಕುಧಾರಿ ಕಳ್ಳರು ಶಾಸಕರ ಕಚೇರಿ ಬೀಗ ಮುರಿದು ಒಳಹೊಕ್ಕಿದ್ದಾರೆ. ಬೆಳಗ್ಗೆ ದಾಖಲೆಗಳು ಚೆಲ್ಲಾಪಿಲ್ಲಿ ಆಗಿ ಬಿದ್ದಿರುವುದನ್ನು ನೋಡಿದ ಕಚೇರಿಯ ಸಿಬ್ಬಂದಿ ಸಿಸಿ ಕ್ಯಾಮೆರಾ ಚೆಕ್ ಮಾಡಿದ್ದಾರೆ. ಆಗ ಈ ಕೃತ್ಯ ಬೆಳಕಿಗೆ ಬಂದಿದೆ.
ಓದಿ: ವಿಲೀನದಂತಹ ಅವಿವೇಕತನ ಪ್ರದರ್ಶನ ಜೆಡಿಎಸ್ ಮಾಡುವುದಿಲ್ಲ: ಹೆಚ್.ಡಿ.ಕುಮಾರಸ್ವಾಮಿ
ಕಚೇರಿಯಲ್ಲಿ ಯಾವ ವಸ್ತುಗಳು ಕಳ್ಳತನವಾಗಿದೆ ಎಂಬುದರ ಬಗ್ಗೆ ಸಿಬ್ಬಂದಿ ಯಾವುದೇ ಮಾಹಿತಿ ನೀಡಿಲ್ಲ. ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಸಿಸಿ ಕ್ಯಾಮರಾದಲ್ಲಿನ ದೃಶ್ಯಾವಳಿ ಆಧರಿಸಿ ಕಳ್ಳರ ಶೋಧಕಾರ್ಯ ನಡೆಸಿದ್ದಾರೆ. ಈ ಬಗ್ಗೆ ರಾಮದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.