ETV Bharat / state

ಕನ್ನಡಪರ ಹೋರಾಟಗಾರರ ವಿರುದ್ಧ ರೌಡಿಶೀಟ್; ಬೆಳಗಾವಿ ಪೊಲೀಸರ ನಡೆಗೆ ಕಾರ್ಯಕರ್ತರ ಆಕ್ಷೇಪ

ಇಬ್ಬರು ಕನ್ನಡಪರ ಹೋರಾಟಗಾರರ ವಿರುದ್ಧ ರೌಡಿಶೀಟ್- ಬೆಳಗಾವಿ ಪೊಲೀಸರ ನಡೆಗೆ ಸಂಘಟನೆಗಳ ಕಾರ್ಯಕರ್ತರಿಂದ ಆಕ್ರೋಶ- ದೀಪಕ್ ದಳವಿ ಮುಖಕ್ಕೆ ಮಸಿ ಬಳಿದವರ ವಿರುದ್ಧ ನೋಟಿಸ್​

Kannada fighters
ಕನ್ನಡಪರ ಹೋರಾಟಗಾರರ ವಿರುದ್ಧ ರೌಡಿಶೀಟ್
author img

By

Published : Feb 11, 2023, 11:16 AM IST

Updated : Feb 11, 2023, 11:55 AM IST

ಬೆಳಗಾವಿ: ಕನ್ನಡಪರ ಹೋರಾಟಗಾರರ ವಿರುದ್ಧ ರೌಡಿಶೀಟ್ ಓಪನ್ ಆಗಿರುವುದು ಬೆಳಕಿಗೆ ಬಂದಿದೆ. ಹೀಗಾಗಿ ಬೆಳಗಾವಿ ಪೊಲೀಸರ ನಡೆ ಈಗ ಸಂಘಟನೆಗಳ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ. ಎಂಇಎಸ್ ಮುಖಂಡ ದೀಪಕ್ ದಳವಿ ಮುಖಕ್ಕೆ ಮಸಿ ಬಳಿದವರ ವಿರುದ್ಧ ರೌಡಿಶೀಟ್ ಓಪನ್ ಆಗಿದೆ. ಬೆಳಗಾವಿ ಪೊಲೀಸರು ಸಂಪತ್‌ಕುಮಾರ್ ದೇಸಾಯಿ ಮತ್ತು ಅನಿಲ್ ದಡ್ಡಿಮನಿ ವಿರುದ್ಧ ರೌಡಿಶೀಟ್ ಓಪನ್​ ಮಾಡಿದ್ದಾರೆ.

ಮುಂಬರುವ ವಿಧಾನಸಭೆ ಚುನಾವಣೆ ಹಿನ್ನೆಲೆ ನೋಟಿಸ್​ ಜಾರಿ ಮಾಡಿದ್ದ ಕಾರಣ ಕೇಳಿ ಕನ್ನಡಪರ ಹೋರಾಟಗಾರರಿಗೆ ಶಾಕ್ ಆಗಿದೆ. ಟಿಳಕವಾಡಿ ಠಾಣೆಯಿಂದ ಅನಿಲ್ ದಡ್ಡಿಮನಿಗೆ ಮತ್ತು ಎಪಿಎಂಸಿ ಠಾಣೆಯಿಂದ ಸಂಪತ್‌ಕುಮಾರ್ ದೇಸಾಯಿಗೆ ಕಾರಣ ಕೇಳಿ ನೋಟಿಸ್ ಜಾರಿಯಾಗಿವೆ. ಚುನಾವಣೆ ಕಾಲದಲ್ಲಿ ಸಾರ್ವಜನಿಕ ಶಾಂತಿ ಹಾಗೂ ಸುವ್ಯವಸ್ಥೆ ಭಂಗ ಉಂಟು ಮಾಡುವ ಸಾಧ್ಯತೆ ಇರುವುದರಿಂದ ಮುಚ್ಚಳಿಕೆ ನೀಡುವಂತೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.

50 ಸಾವಿರ ರೂಪಾಯಿ ಮೊತ್ತದ ಸ್ವಯಂ ಮುಚ್ಚಳಿಕೆ ಹಾಗೂ ಇಷ್ಟೇ ಮೊತ್ತದ ಇಬ್ಬರು ಜಾಮೀನುದಾರರಿಂದ ಮುಚ್ಚಳಿಕೆ ಪಡೆಯುವಂತೆ ನೋಟಿಸ್​ನಲ್ಲಿ ತಿಳಿಸಲಾಗಿದೆ. ಪೀರನವಾಡಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ ಹೋರಾಟದಲ್ಲಿ ಈ ಇಬ್ಬರು ಯುವಕರು ಮುಂಚೂಣಿಯಲ್ಲಿದ್ದರು. ಅಷ್ಟೇ ಅಲ್ಲ, ಈ ಇಬ್ಬರು ಯುವಕರು 2021ರ ಡಿಸೆಂಬರ್‌ನಲ್ಲಿ ಬೆಳಗಾವಿ ಅಧಿವೇಶನಕ್ಕೆ ಪ್ರತಿಯಾಗಿ ಎಂಇಎಸ್ ಆಯೋಜಿಸಿದ್ದ ಮಹಾಮೇಳಾವ್‌ಗೆ ನುಗ್ಗಿ ಎಂಇಎಸ್ ಮುಖಂಡ ದೀಪಕ್ ದಳವಿಗೆ ಮಸಿ ಬಳಿದಿದ್ದರು. ಬಳಿಕ ಎಂಇಎಸ್ ಮುಖಂಡ ದೀಪಕ್ ದಳವಿ ಮುಖಕ್ಕೆ ಮಸಿ ಬಳಿದ ಹಿನ್ನೆಲೆ ಜೈಲು ಸೇರಿ ಬಿಡುಗಡೆಯಾಗಿದ್ದರು.

ಇದನ್ನೂ ಓದಿ: ಕಾಂಗ್ರೆಸ್ ಹೈಕಮಾಂಡ್ ಅಂಗಳಕ್ಕೆ 120 ಅಭ್ಯರ್ಥಿಗಳ ಪಟ್ಟಿ.. ಹಾಲಿ ಶಾಸಕರಿಗೆಲ್ಲಾ ಟಿಕೆಟ್ ನೀಡಲು 'ಹಸ್ತ'ದಲ್ಲಿ ಒಲವು

ದಾವಣಗೆರೆಯಲ್ಲಿ ಕನ್ನಡಪರ ಹೋರಾಟಗಾರನ ಹತ್ಯೆ: ಜಗಳೂರು ತಾಲೂಕಿನ ಕರ್ನಾಟಕ ರಕ್ಷಣಾ ವೇದಿಕೆ ಕನ್ನಡ ಸೇನೆಯ ತಾಲೂಕಾಧ್ಯಕ್ಷ ರಾಮಕೃಷ್ಣ ಎಂಬವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿದ್ದರು. ಜನವರಿ 7ರಂದು ದಾವಣಗೆರೆಯ ಜಗಳೂರು ತಾಲೂಕಿನ ಹೊಸಕೆರೆ ಡಾಬಾ ಬಳಿ ಪಾರ್ಟಿಯಲ್ಲಿ ಘಟನೆ ಸಂಭವಿಸಿತ್ತು.

ತಾಲೂಕು ಅಧ್ಯಕ್ಷ ರಾಮಕೃಷ್ಣ ಅವರನ್ನು ಆರೋಪಿಗಳು ಪಾರ್ಟಿ ಮಾಡಲೆಂದು ಹೊಸಕೆರೆ ಡಾಬಾಕ್ಕೆ ಕರೆಸಿಕೊಂಡಿದ್ದರು. ಮದ್ಯದ ನಶೆಯಲ್ಲಿದ್ದ ಮೂವರ ಮಧ್ಯೆ ಜಗಳ ನಡೆದಿತ್ತು. ಆ ಬಳಿಕ ಗಲಾಟೆ ಕೋಪಕ್ಕೆ ತಿರುಗಿತ್ತು. ಈ ವೇಳೆ ಆರೋಪಿಗಳಾದ ಅರ್ಜುನ್​ ಮತ್ತು ಪ್ರಶಾಂತ್​ ಕಬ್ಬಿಣದ ರಾಡ್​ ಮತ್ತು ಕಲ್ಲುಗಳಿಂದ ರಾಮಕೃಷ್ಣ ಅವರನ್ನು ಜಜ್ಜಿ ಹತ್ಯೆ ಮಾಡಿದ್ದರು. ಈ ಸಂಬಂಧ ಅರ್ಜುನ್​ ಮತ್ತು ಪ್ರಶಾಂತ್​ ಎಂಬ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಅಲ್ಲದೇ ಈ ಸಂಬಂಧ ಕನ್ನಡ ಪರ ಸಂಘಟನೆಯ ಹೋರಾಟಗಾರರು ತೀವ್ರ ಪ್ರತಿಭಟನೆ ನಡೆಸಿದ್ದರು.

ಇದನ್ನೂ ಓದಿ: ಮಹದಾಯಿ ನದಿಯನ್ನು ಮಲಪ್ರಭಾಗೆ ಜೋಡಿಸುವ ಮೂಲಕ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಬದ್ಧ: ಸಿಎಂ ಬೊಮ್ಮಾಯಿ

Last Updated : Feb 11, 2023, 11:55 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.