ಬೆಳಗಾವಿ: ಕಾಂಗ್ರೆಸ್ ಪಕ್ಷದವರಿಗೆ ಬದಲಾವಣೆ ಆಗೋದಕ್ಕೆ, ಪಕ್ಷ ಸಂಘಟನೆ ಮಾಡುವುದಕ್ಕೆ ಇದೊಂದು ಸೋಲು ಪಾಠವಾಗಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಎಲ್ಲೆಡೆ ಕಾಂಗ್ರೆಸ್ ಮುಕ್ತ ಕರ್ನಾಟಕವಾಗಲಿದೆ ಎಂದು ಸುಳ್ಳು ಪ್ರಚಾರ ಮಾಡುತ್ತಿದ್ದಾರೆ. ಅದು ಅವರು ಕಾಣುತ್ತಿರುವ ಹಗಲುಕನಸು. ಎಂದೆಂದಿಗೂ ಕಾಂಗ್ರೆಸ್ ಮುಕ್ತ ಮಾಡಲು ಅವರಿಂದ ಸಾಧ್ಯವಿಲ್ಲ. ಗೋವಾದಲ್ಲಿ ಮತಗಳು ವಿಭಜನೆಯಾಗಿದ್ದರಿಂದ ನಮ್ಮ ಪಕ್ಷಕ್ಕೆ ತೊಂದರೆಯಾಗಿದೆಯೇ ವಿನಃ ಯಾವ ದೊಡ್ಡ ಮಟ್ಟದಲ್ಲಿ ನಾವೇನು ಸೋತಿಲ್ಲ ಎಂದರು.
ಗೋವಾದಲ್ಲಿ ಹಾಗೂ ಉತ್ತರ ಪ್ರದೇಶದಲ್ಲಿ ಮತಗಳು ವಿಭಜನೆಯಾಗಿದ್ದರಿಂದ ನಾವು ಸೋಲಲು ಕಾರಣವಾಗಿದೆ. ಗೋವಾದಲ್ಲಿ ನಮ್ಮ ವೋಟ್ ಬ್ಯಾಂಕ್ ಶೇ. 32ರಷ್ಟಿದ್ದು, ಅದರಲ್ಲಿ ಕೇವಲ ಶೇ. 2ರಷ್ಟು ಮಾತ್ರ ಕಡಿಮೆಯಾಗಿದೆಯೇ ಹೊರತು ಅಷ್ಟು ದೊಡ್ಡಮಟ್ಟದಲ್ಲಿ ವೋಟ್ ಕಳೆದುಕೊಂಡಿಲ್ಲ. ಮುಂದಿನ ದಿನಗಳಲ್ಲಿ ನಮ್ಮ ಪಕ್ಷ ಸಂಘಟಿಸಿ ರಾಜ್ಯದಲ್ಲಿ ಅಧಿಕಾರ ತರಲು ಶ್ರಮಿಸಲಾಗುವುದು ಎಂದು ತಿಳಿಸಿದರು.
ಇದನ್ನೂ ಓದಿ: ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದ ಪ್ರಮೋದ್ ಮುತಾಲಿಕ್